9:00 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಹಿರ್ಗಾನ: ಆಟೊರಿಕ್ಷಾಕ್ಕೆ ಬೈಕ್ ಡಿಕ್ಕಿ; ಮದ್ಯದ ಅಮಲಿನಲ್ಲಿ ತೇಲುತ್ತಿದ್ದ ಸವಾರರಿಬ್ಬರಿಗೆ ಸಾರ್ವಜನಿಕರಿಂದ ತರಾಟೆ

08/08/2022, 20:10

ಕಾರ್ಕಳ(reporterkarnataka.com):
ಆಟೊರಿಕ್ಷಾಕ್ಕೆ ಬೈಕ್ ವೊಂದು ಡಿಕ್ಕಿ ಹೊಡೆದ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಮುಖ್ಯರಸ್ತೆಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಅದೃಷ್ಟವಶಾತ್ ಬೈಕ್ ಸವಾರರಿಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. 

ಬೈಕ್ ಸವಾರರಿಬ್ಬರು ಹಾರ್ಜಡ್ಡು ನಿವಾಸಿಗಳೆಂದು ತಿಳಿದುಬಂದಿದ್ದು, ಇವರು ಮದ್ಯಪಾನ ಮಾಡಿ ಬೈಕ್ ಸವಾರಿ ಮಾಡಿಕೊಂಡು ಹೋಗುತ್ತಿದ್ದರು. ಹಿರ್ಗಾನ ಮುಖ್ಯ ರಸ್ತೆಯಲ್ಲಿ ನಿಯಂತ್ರಣ ತಪ್ಪಿ ಮದ್ಯ ಅಮಲಿನಲ್ಲಿ ಎದುರಿನಿಂದ ಬರುತ್ತಿದ್ದ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ. ಬೈಕ್ ಸಮೇತ ರಸ್ತೆಗೆ ಬಿದ್ದ ಸವಾರರಿಬ್ಬರು ಸಣ್ಣಪುಟ್ಟಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಆಟೊ ಚಾಲಕ ಕೂಡ ಸ್ಥಳೀಯರಾಗಿದ್ದು, ಹೆಚ್ಚಿನ ಅನಾಹುತ ಸಂಭವಿಸಿಲ್ಲ. ಘಟನೆ ನಡೆಯುತ್ತಿದ್ದಂತೆ ಸ್ಥಳೀಯರು ಒಟ್ಟುಗೂಡಿದ್ದು, ಮದ್ಯದ ಅಮಲಿನಲ್ಲಿ ತೇಲುತ್ತಿದ್ದ ಬೈಕ್ ಸವಾರರಿಬ್ಬರನ್ನು ಸರಿಯಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು