2:20 AM Sunday19 - January 2025
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಕೃಷಿ ಬಲವರ್ಧನೆ ನೆರವಿಗೆ ಸಚಿವ ಚಲುವರಾಯಸ್ವಾಮಿ ಮನವಿ: ಕೇಂದ್ರ ಸಮ್ಮತಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕೋತಿಗೆ ಗ್ರಾಪಂ ಮಾಜಿ ಅಧ್ಯಕ್ಷರಿಂದ ಅಂತ್ಯ ಸಂಸ್ಕಾರ: ರಾತ್ರಿ… ಜಾತಿಗಣತಿ ವರದಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡನೆ: ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ… ಸಂಭ್ರಮ- ಸಡಗರಕ್ಕೆ ಸಾಕ್ಷಿಯಾದ ಕಡಲನಗರಿಯ ಮಂಗಳಾ ಕ್ರೀಡಾಂಗಣ: 4500 ಕ್ರೀಡಾಪಟುಗಳ ಪಾದಸ್ಪರ್ಶ ಎಷ್ಟಾದರೂ ಹಣ-ಸವಲತ್ತು ಕೇಳಿ ಕೊಡ್ತೀನಿ, ಆದರೆ ಒಲಂಪಿಕ್ ಮೆಡಲ್ ತನ್ನಿ: ಮಂಗಳೂರಿನಲ್ಲಿ ಸಿಎಂ… ಮಂಗಳೂರು: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಸಿಎಂ ಸಿದ್ದರಾಮಯ್ಯ… ಮಂಗಳೂರಿಗೆ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ: ರಾಜೀವ್ ಗಾಂಧಿ ವಿವಿ ಪ್ರಾದೇಶಿಕ ಕೇಂದ್ರಕ್ಕೆ ಶಿಲಾನ್ಯಾಸ ಕುರ್ಚಿಗಾಗಿ ಕಾದಾಟದಲ್ಲೇ ಎಲ್ಲರೂ ಮಗ್ನ, ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆ: ಪ್ರತಿಪಕ್ಷ… ಕೆಎಎಸ್‌ ಪೂರ್ವಭಾವಿ ಮರುಪರೀಕ್ಷೆಯ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್… ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ 6 ಬಾರಿ ಚಾಕು ಇರಿತ: ಮುಂಜಾನೆ…

ಇತ್ತೀಚಿನ ಸುದ್ದಿ

ಮಹಿಳೆಗೆ ಅವಮಾನ: ಬಿಜೆಪಿ ಮುಖಂಡನ ಫ್ಲಾಟ್‌ನ ಹೊರಗಿನ ಅಕ್ರಮ ಕಟ್ಟಡ ಮೇಲೆ ಬುಲ್ಡೋಜರ್ ಕಾರ್ಯಾಚರಣೆ

08/08/2022, 21:06

ನೋಯ್ಡಾ( reporterkarnataka.com):ಮಹಿಳೆಯೊಬ್ಬರ ಜತೆ ಗಲಾಟೆ ಮಾಡಿ ಅವಾಚ್ಯ ಪದ ಬಳಸಿದ ಬಿಜೆಪಿ ಮುಖಂಡರೊಬ್ಬರ ನೋಯ್ಡಾ ಫ್ಲಾಟ್‌ನ ಹೊರಗಿನ ಅಕ್ರಮ ಕಟ್ಟಡಗಳನ್ನು ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರಕಾರ ಬುಲ್ಡೋಜರ್ ಕಾರ್ಯಾಚರಣೆ ನಡೆಸಿ ಕಿತ್ತು ಹಾಕಿದೆ.

ಬಿಜೆಪಿ ಕಿಸಾನ್ ಮೋರ್ಚಾದ ಮುಖಂಡ ಶ್ರೀಕಾಂತ್ ತ್ಯಾಗಿ ಮಹಿಳೆಯೊಂದಿಗೆ ಗಲಾಟೆ ಮಾಡಿದ್ದಲ್ಲದೆ ಕೀಳುಮಟ್ಟದಲ್ಲಿ ವರ್ತಿಸಿದ್ದಾರೆ. ಈ ವಿಚಾರ ಗಮನಕ್ಕೆ ಬರುತ್ತಿದ್ದಂತೆ ಯೋಗಿ ಸರ್ಕಾರದ ಬುಲ್ಡೋಜರ್ ಕಾರ್ಯರೂಪಕ್ಕಿಳಿದಿದೆ. ನೋಯ್ಡಾದ ಗ್ರ್ಯಾಂಡ್ ಓಮ್ಯಾಕ್ಸ್ ಸೊಸೈಟಿಯ ಸೆಕ್ಟರ್-93Bಯಲ್ಲಿರುವ ತ್ಯಾಗಿಗೆ ಸೇರಿದ ಅಕ್ರಮ ಕಟ್ಟಡವನ್ನು ಅಧಿಕಾರಿಗಳು ಹಾಗೂ ಪೊಲೀಸರು ಬುಲ್ಡೋಜರ್ ಕಾರ್ಯಾಚರಣೆ ನಡೆಸಿ ತೆರವುಗೊಳಿಸಿದ್ದಾರೆ. ಕಾರ್ಯಾಚರಣೆಗೆ ಅಡ್ಡಿಪಡಿಸಿದ ತ್ಯಾಗಿ ಬೆಂಬಲಿಗರನ್ನು ಪೊಲೀಸರು ಚದುರಿಸಿದ್ದಲ್ಲದೆ, ತ್ಯಾಗಿ ವಿರುದ್ಧ ಗ್ಯಾಂಗ್‌ಸ್ಟರ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಕೆಲವು ದಿನಗಳ ಹಿಂದೆ ಗ್ರ್ಯಾಂಡ್ ಓಮ್ಯಾಕ್ಸ್ ಸೊಸೈಟಿಯಲ್ಲಿ ಮಹಿಳೆ ಮತ್ತು ತ್ಯಾಗಿ ನಡುವೆ ಜಗಳವಾಗಿತ್ತು. ತ್ಯಾಗಿ ಸಸಿಗಳನ್ನು ನೆಡುವ ಸಂದರ್ಭದಲ್ಲಿ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಮಹಿಳೆ ಪ್ರತಿಭಟಿಸಿದರು. ಈ ವೇಳೆ ತನಗೆ ಏನು ಬೇಕಾದರೂ ಮಾಡುವ ಹಕ್ಕಿದೆ ಎಂದು ವಾದ ಮಾಡುತ್ತಾ ಮಹಿಳೆಯನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆ ನಡೆಸಲಾಗಿತ್ತು.

ಬಿಜೆಪಿ ಕಿಸಾನ್ ಮೋರ್ಚಾದ ಸದಸ್ಯ ಎಂದು ಹೇಳಿಕೊಂಡರೂ ಪಕ್ಷ ಹಿಂದೆ ಸರಿಯದೆ ಆತನ ವಿರುದ್ಧ ಕ್ರಮ ಕೈಗೊಂಡಿದೆ. ಅಧಿಕಾರ ದುರುಪಯೋಗ ಪಡಿಸಿಕೊಂಡ ಶ್ರೀಕಾಂತ್ ತ್ಯಾಗಿ ವಿರುದ್ಧ ಕೈಗೊಂಡ ಕ್ರಮಗಳಿಗಾಗಿ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರಕ್ಕೆ, ಬಿಜೆಪಿಯ ದೆಹಲಿ ವಕ್ತಾರ ಖೇಮಚಂದ್ ಶರ್ಮಾ ಧನ್ಯವಾದ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು