ಇತ್ತೀಚಿನ ಸುದ್ದಿ
ಚಿಕ್ಕಮಗಳೂರು: ಮಳೆಯ ಅಬ್ಬರಕ್ಕೆ 24 ತಾಸಿನಲ್ಲಿ 29ಕ್ಕೂ ಹೆಚ್ಚು ಮನೆಗಳಿಗೆ ಹಾನಿ; ಮಹಿಳೆ ಪಾರು
09/08/2022, 13:44
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಅಬ್ಬರಕ್ಕೆ ಕಳೆದ 24 ಗಂಟೆಯಲ್ಲಿ 29ಕ್ಕೂ ಹೆಚ್ಚು ಮನೆಗಳಿಗೆ ಹಾನಿಯುಂಟಾಗಿದೆ.ವರುಣನ ರುದ್ರ ನರ್ತನಕ್ಕೆ 4 ಹಸುಗಳು ಸಾವನ್ನಪ್ಪಿವೆ. ಕೂದಲೆಳೆ ಅಂತರದಲ್ಲಿ ಮಹಿಳೆಯೊಬ್ಬರು
ಸಾವಿನಿಂದ ಪಾರಾದ ಘಟನೆ ನಡೆದಿದೆ.
ತರೀಕೆರೆ ತಾಲೂಕಿನ ಸೀತಾಪುರ ಕಾವಲ್ ನಲ್ಲಿ ಮನೆಯ ಮೇಲ್ಛಾವಣಿ ಸಮೇತ ಗೋಡೆ ಕುಸಿದು ಬಿದ್ದ ಪರಿಣಾಮ ವಳ್ಳಿಯಮ್ಮ ಎಂಬವರು ಕೂದಲೆಳೆ ಅಂತರದಲ್ಲಿ ಸಾವಿನಿಂದ ಪಾರಾಗಿದ್ದಾರೆ.
ಕಳಸ, ಮೂಡಿಗೆರೆ, ಎನ್.ಆರ್.ಪುರ, ಕೊಪ್ಪ, ಶೃಂಗೇರಿಯಲ್ಲಿ ಮಳೆ ಮುಂದುವರಿದಿದೆ.
ಬಯಲುಸೀಮೆ ಕಡೂರು, ತರೀಕೆರೆಯಲ್ಲೂ ಭಾರೀ ಮಳೆ ಅಧಿಕವಾಗಿದೆ. ಸ್ಥಳಕ್ಕೆ ಅಧಿಕಾರಿಗಳ ಭೇಟಿ, ಪರಿಶೀಲನೆ ನಡೆಸಿದ್ದಾರೆ.