2:24 PM Sunday6 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಸ್ವಾತಂತ್ರ್ಯ ಹೋರಾಟಗಾರ ಮಟ್ಟಾರ ವಿಠ್ಠಲ ಕಿಣಿಗೆ ಸನ್ಮಾನ: ಕ್ವಿಟ್ ಇಂಡಿಯಾ ಚಳುವಳಿ ನೆನಪಿಸಿದ ದೇಶದ ಕಟ್ಟಾಳು

09/08/2022, 22:07

ಮಂಗಳೂರು(reporterkarnataka.com): ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ 
ಜಿಲ್ಲಾಡಳಿತದ ವತಿಯಿಂದ ನಗರದ ಅಳಕೆಯಲ್ಲಿರುವ ಸ್ವಗೃಹದಲ್ಲಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಮಟ್ಟಾರ ವಿಠ್ಠಲ ಕಿಣಿ ಅವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು.


ಶಾಸಕ ವೇದವ್ಯಾಸ್ ಕಾಮತ್, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಅಕ್ಷಯ್ ಶ್ರೀಧರ್, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಅವರು  ಮಟ್ಟಾರ ವಿಠ್ಠಲ ಕಿಣಿ ಅವರನ್ನು ಸನ್ಮಾನಿಸಿದರು.

ಮಂಗಳೂರು ಸಹಾಯಕ ಆಯುಕ್ತ ಮದನ್ ಮೋಹನ್, ತಹಶೀಲ್ದಾರ್ ರಶ್ಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್, ಸ್ಥಳೀಯ ಕಾರ್ಪೋರೇಟರ್,  ಕಂದಾಯ ಸೇರಿದಂತೆ ಇತರೆ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಸೇರಿದಂತೆ ಮಟ್ಟಾರು ವಿಠಲ ಕಿಣಿ ಅವರ ಕುಟುಂಬದ ಸದಸ್ಯರು, ಹಿತೈಷಿಗಳು ಈ ಸಂದರ್ಭದಲ್ಲಿದ್ದರು.

ಈ ವೇಳೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರೊಂದಿಗೆ ಮಾತನಾಡಿದ ಮಟ್ಟಾರ ವಿಠ್ಠಲ ಕಿಣಿಯವರು ಸ್ವಾತಂತ್ರ್ಯ ಚಳುವಳಿಯು ಬಹಳ ಸ್ಪೂರ್ತಿದಾಯಕವಾಗಿತ್ತು, ಯುವಕರಾದ ನಾವು 1942ರ ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಗಾಂಧೀಜಿಯವರ ಕರೆಯ ಮೇರೆಗೆ ಭಾಗವಹಿಸಿದ ಅನುಭವವನ್ನು ಹಂಚಿಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು