5:38 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಮೂಡಿಗೆರೆ: ಮನೆ ಮೇಲೆ ಮರ ಬಿದ್ದು ಇಬ್ಬರು ಮಹಿಳೆಯರ ದಾರುಣ ಸಾವು; ಕಾಫಿನಾಡಿನಲ್ಲಿ ಮುಂದುವರಿದ ಮಳೆ ಅಬ್ಬರ

10/08/2022, 09:22

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಲೆನಾಡಿನಲ್ಲಿ ಮಳೆಯ ಅಬ್ಬರ ಮುಂದುವರಿಸಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮಂಗಳವಾರ ರಾತ್ರಿ ಸುರಿದ ಭಾರಿ ಮಳೆಗೆ ಮೂಡಿಗೆರೆ ತಾಲೂಕಿನ ಬಾಳೂರು ಠಾಣಾ ವ್ಯಾಪ್ತಿಯ ಕೆ ತಲಗೂರು ಎಂಬಲ್ಲಿ ಮನೆ ಮೇಲೆ ಬೃಹತಾಕಾರದ ಮರ ಒಂದು ಬಿದ್ದು ಮನೆಯಲ್ಲಿದ್ದ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. 

ರಾತ್ರಿ ಸುಮಾರು10.00 ಗಂಟೆಯ ಸಮಯದಲ್ಲಿ ಕೆ. ತಲಗೂರು ಗ್ರಾಮದ ಚಂದ್ರಮ್ಮ ಅವರ ಮನೆಯಲ್ಲಿ ಚಂದ್ರಮ್ಮ ಮತ್ತು ಸರಿತಾ ಹಾಗೂ ಸರಿತಾ  ಅವರ ಮಕ್ಕಳಾದ ಸುನಿಲ್ ಹಾಗೂ ದೀಕ್ಷಿತ್  ಅವರು ಮಲಗಿದ್ದಾಗ ಮನೆಯ ಪಕ್ಕದಲ್ಲಿ ಇದ್ದ ಬೃಹದಾಕಾರದ ಮರ ಚಂದ್ರಮ್ಮ ಅವರ ಮನೆಯ ಮೇಲೆ ಬಿದ್ದು  ಮನೆಯೊಳಗೆ ಮಲಗಿದ್ದ ಸರಿತಾ
ಅವರು ಸ್ಥಳದಲ್ಲಿ ಮೃತಪಟ್ಟಿದ್ದು, ಚಂದ್ರಮ್ಮ ರವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮದ್ಯೆ ಮೃತಪಟ್ಟಿದ್ದಾರೆ. ಮೃತರಾದ ಸರಿತಾ ಮತ್ತು ಚಂದ್ರಮ್ಮ ರವರು ಸಂಬಂಧಿಕರಾಗಿದ್ದು, ಅಕ್ಕಪಕ್ಕದ ಮನೆಯವರಾಗಿದ್ದಾರೆ.


ಕಳೆದ ಒಂದು ವಾರದಿಂದ ಮೂಡಿಗೆರೆ ಮತ್ತು ಕಳಸ ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಮತ್ತು ಗಾಳಿ ಬೀಸುತ್ತಿದ್ದು ಗಾಳಿ ಮಳೆಗೆ ಮರ ಬಿದ್ದು ಈ ಅನಾಹುತ ಸಂಭವಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು