10:31 PM Tuesday30 - April 2024
ಬ್ರೇಕಿಂಗ್ ನ್ಯೂಸ್
ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ… ಸುಪ್ರೀಂ ಕೋರ್ಟ್ ಸೂಚಿಸಿದ ಬಳಿಕ ಕೊನೆಗೂ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡಿದ… ಚಳ್ಳಕೆರೆ ತಾಲೂಕಿನಲ್ಲಿ ಶಾಂತಿಯುತ ಮತದಾನ: ಚುನಾವಣೆ ಕರ್ತವ್ಯನಿರತ ಮಹಿಳಾ ಸಿಬ್ಬಂದಿ ಸಾವು

ಇತ್ತೀಚಿನ ಸುದ್ದಿ

ಸೋಮವಾರಪೇಟೆ ಪುಷ್ಪಗಿರಿ ಬೆಟ್ಟದ ತಪ್ಪಲಿನಲ್ಲಿ ಭಾರಿ ಭೂಕುಸಿತ: ಸುರಕ್ಷಿತ ಸ್ಥಳಕ್ಕೆ ತೆರಳಲು ಸ್ಥಳೀಯರಿಗೆ ಸೂಚನೆ

10/08/2022, 20:23

ಸೋಮಾರಪೇಟೆ(reporterkarnataka.com): ಕೊಡಗು ಜಿಲ್ಲೆಯಲ್ಲಿ ಮತ್ತೆ ಭೂಕುಸಿತ ಉಂಟಾಗಿದ್ದು, ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಪುಷ್ಪಗಿರಿ ಬೆಟ್ಟದ ತಪ್ಪಲಿನಲ್ಲಿರುವ ಹರಪಲ್ಲಿ ಗ್ರಾಮದಲ್ಲಿ ಭಾರಿ ಭೂಕುಸಿತ ಉಂಟಾಗಿದೆ. ಸ್ಥಳೀಯ ನಿವಾಸಿಗಳು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಜಿಲ್ಲಾಡಳಿತ ಸೂಚಿಸಿದೆ.

ಪುಷ್ಪಗಿರಿ ಬೆಟ್ಟದಲ್ಲಿ ಕಿ.ಮೀ ಗಟ್ಟಲೇ ಬೆಟ್ಟ ಕುಸಿದಿದ್ದು ಸ್ಥಳೀಯರಲ್ಲಿ ಭಾರೀ ಆತಂಕ ಮನೆ ಮಾಡಿದೆ. ಹೆಚ್.ಎ.ಸೋಮಯ್ಯ ಅವರ ಮನೆ ಬಳಿ‌ ಭೂಮಿ ಕುಸಿದು ಹೋಗಿದೆ. ಮನೆಯಿಂದ 20 ಅಡಿ ದೂರದಲ್ಲಿ ಕುಸಿತ ಉಂಟಾಗಿದ್ದು, ಇದರಿಂದಾಗಿ ಸೋಮಯ್ಯ ಅವರ ಮನೆ


ಅಪಾಯಕ್ಕೆ ಸಿಲುಕಿದೆ. ನಿನ್ನೆ ಸುರಿದ ಮಳೆಯಿಂದ ಉಂಟಾದ ಭೂಕುಸಿತಗೊಂಡಿದೆ. ಸ್ಥಳಕ್ಕೆ ಅಧಿಕಾರಿಗಳ ಭೇಟಿ ಪರಿಶೀಲನೆ ಮಾಡಿದ್ದಾರೆ.

ಬೆಟ್ಟದ ಮೇಲ್ಭಾಗದಲ್ಲೂ ಬಿರುಕು ಮೂಡಿರುವ ಹಿನ್ನಲೆಯಲ್ಲಿ ಸ್ಥಳೀಯ ನಿವಾಸಿಗಳಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಜಿಲ್ಲಾಡಳಿತ ಸೂಚಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು