ಇತ್ತೀಚಿನ ಸುದ್ದಿ
ನಿನ್ನೆ ರಾಜೀನಾಮೆ ಇಂದು ಮತ್ತೆ ಗದ್ದುಗೆಗೆ!: ಬಿಹಾರದಲ್ಲಿ 8ನೇ ಬಾರಿಗೆ ಮುಖ್ಯಮಂತ್ರಿಯಾದ ನಿತೀಶ್ ಕುಮಾರ್
10/08/2022, 20:40
ಪಾಟ್ನಾ(reporterkarnataka.com):
ಮುಖ್ಯಮಂತ್ರಿ ಸ್ಥಾನಕ್ಕೆ ನಿನ್ನೆ ರಾಜೀನಾಮೆ ನೀಡಿದ್ದ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ 8ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ಇಂದು
ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ನಿತೀಶ್ ಇಂದು ಮಹಾ ಘಟಬಂಧನ್ ಸರ್ಕಾರದ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದು, ಪಾಟ್ನಾದ ರಾಜಭವನದಲ್ಲಿ ರಾಜ್ಯಪಾಲರು ಪ್ರತಿಜ್ಞಾವಿಧಿ ಬೋಧಿಸಿದರು.
ಇದೇ ಸಂದರ್ಭ ಉಪ ಮುಖ್ಯಮಂತ್ರಿಯಾಗಿ ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ನಿನ್ನೆ ಬಿಜೆಪಿಯೊಂದಿಗಿನ ಮೈತ್ರಿ ಮುರಿದುಕೊಂಡಿದ್ದ ನಿತೀಶ್, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.