ಇತ್ತೀಚಿನ ಸುದ್ದಿ
ಮಡಿಕೇರಿ: ಆನೆ ದಂತ ಮಾರಾಟ ಯತ್ನ; ಇಬ್ಬರು ಆರೋಪಿಗಳ ಬಂಧನ, ದಂತ ವಶ
11/08/2022, 10:10
ಮಡಿಕೇರಿ(reporterkarnataka.com):
ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಾಟಕೇರಿ ಜಂಕ್ಷನ್ ಬಳಿ ಆನೆ ದಂತ ಮಾರಾಟ ಮಾಡಲೆತ್ನಿಸಿದ ಇಬ್ಬರು ಆರೋಪಿಗಳನ್ನು ಬಂಧಿಸಿ ಪೊಲೀಸರು ದಂತ ವಶಪಡಿಸಿಕೊಂಡಿದ್ದಾರೆ.
ಆಶಿತ್ ಪಿ. ಮತ್ತು ಸುಭಾಷ್ ಬಂಧಿತ ಆರೋಪಿಗಳಾಗಿದ್ದಾರೆ. ಅರಣ್ಯ ಘಟಕದ ಸಿಐಡಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ.
ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಘಟಕದ ಪ್ರಭಾರ ಅಧೀಕ್ಷಕ ಶ್ರೀನಿವಾಸ್ ರೆಡ್ಡಿ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ
ಮಡಿಕೇರಿ ಅರಣ್ಯ ಸಂಚಾರಿ ದಳದ ಪಿ.ಎಸ್.ಐ ಸಿ.ಯು. ಸವಿ, ಸಿಬ್ಬಂದಿ ಶೇಖರ್,ರಾಜೇಶ್, ರಾಘವೇಂದ್ರ, ಯೋಗೇಶ್, ಮೋಹನ, ಮಂಜುನಾಥ ಪಾಲ್ಗೊಂಡಿದ್ದರು.