8:48 AM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಆಷಾಢಕ್ಕೆ ತವರು ಮನೆ ಬಂದಿದ್ದ ನವವಧು ಪ್ರಿಯಕರ ಜತೆ ಪರಾರಿ: ಸಿಕ್ಕಿ ಬಿದ್ದ ಬಳಿಕ ಮನನೊಂದು ನೇಣಿಗೆ ಶರಣು

11/08/2022, 20:51

ಮೈಸೂರು(reporterkarnataka.com):ಆಷಾಢ ಮಾಸಕ್ಕಾಗಿ ತವರು ಮನೆಗೆ ಬಂದಿದ್ದ ನವ ವಧು ಪಕ್ಕದ ಮನೆಯಲ್ಲಿದ್ದ ಪ್ರಿಯಕರನ ಜತೆ ಪರಾರಿಯಾಗಿದ್ದು, ಪೊಲೀಸರಿಗೆ ಸಿಕ್ಕಿ ಬಿದ್ದ ಬಳಿಕ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಿಸಿಕೊಂಡ ಪೊಲೀಸರು ಒಂದು ವಾರದಲ್ಲಿ ನವವಧುವನ್ನುಪತ್ತೆ ಮಾಡಿ ಪ್ರಿಯಕರನಿಂದ ಬೇರ್ಪಡಿಸಿದ್ದರು.

ಪ್ರಿಯಕರನಿಂದ ದೂರವಾದರಿಂದ ಮನನೊಂದ ನವವಧು ನೇಣಿಗೆ ಶರಣಾಗಿರುವ ಘಟನೆ ನಂಜನಗೂಡು ತಾಲೂಕು ರಾಂಪುರ ಗ್ರಾಮದಲ್ಲಿ ಘಟನೆ ನಡೆದಿದೆ.

ವರ್ಷಿತಾ(20) ಮೃತಪಟ್ಟಿರುವ ನವವಧು. ವರ್ಷಿತಾ ತನ್ನ ಮನೆಯ ಪಕ್ಕದಲ್ಲಿದ್ದ ಕಿರಣ್ ಎಂಬಾತನನ್ನ ಪ್ರೀತಿಸುತ್ತಿದ್ದಳು. ಮಗಳ ಮನ ಒಲಿಸಿ ಚಾಮರಾಜನಗರದ ಯುವಕನೊಂದಿಗೆ ಮೇ 8 ರಂದು ಅದ್ಧೂರಿಯಾಗಿ ಆಕೆಯ ವಿವಾಹ ಮಾಡಿಕೊಡಲಾಗಿತ್ತು.

ಆಷಾಢ ಮಾಸ ಹಿನ್ನೆಲೆ ವರ್ಷಿತಾ ತವರು ಮನೆ ಕಾರ್ಯಕ್ರಮಕ್ಕೆ ಆಗಮಿಸಿದ್ದಳು. ಈ ವೇಳೆ ಪಕ್ಕದ ಮನೆಯಲ್ಲಿದ್ದ ಪ್ರಿಯತಮ ಕಿರಣ್ ಜತೆ ಮನೆ ಬಿಟ್ಟು ಪರಾರಿಯಾಗಿದ್ದಳು.

ಈ ಬಗ್ಗೆ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರೇಮಿಗಳು ಬೆಂಗಳೂರಿನಲ್ಲಿ ಸಿಕ್ಕಿಬಿದ್ದಿದ್ದು, ವಾಪಸ್ ಕರೆತಂದ ಪೊಲೀಸರು ಇಬ್ಬರಿಗೂ ಬುದ್ಧಿವಾದ ಹೇಳಿ ಅವರ ಮನೆಗೆ ಕಳುಹಿಸಿದ್ದರು.

ನಂತರ ಆಕೆ ಮೈಸೂರಿನಲ್ಲಿದ್ದ ಸಂಬಂಧಿಕರ ಮನೆಗೆ ಹೋಗಿ 3 ದಿನ ಕಳೆದು, ನಂತರ ರಾಂಪುರ ಗ್ರಾಮದಲ್ಲಿರುವ ತನ್ನ ತಾತನ ಮನೆಗೆ ಬಂದಿದ್ದಳು ಎನ್ನಲಾಗಿದೆ.

ಪ್ರಿಯಕರ ದೂರವಾಗಿದ್ದರಿಂದ ಮನನೊಂದಿದ್ದ ವರ್ಷಿತಾ ತಾತನ ಮನೆಯ ವಾಶ್ ರೂಂ ನಲ್ಲಿ ನೇಣಿಗೆ ಶರಣಾಗಿದ್ದಾಳೆ ಎಂಬ ಮಾಹಿತಿ ಲಭ್ಯವಾಗಿದೆ. ಘಟನೆ ಸಂಬಂಧ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು