5:41 AM Friday13 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಮರವಂತೆ ವರಾಹಸ್ವಾಮಿ ದೇವಸ್ಥಾನ: ಭಕ್ತರ ವೇಷದಲ್ಲಿ ಬಂದ ದಂಪತಿಯಿಂದ ಕಾಣಿಕೆ ಡಬ್ಬಿ ಕಳವು ಯತ್ನ; ಸೆರೆ

11/08/2022, 23:35

ಕುಂದಾಪುರ(reporterkarnataka.com):ಮರವಂತೆ ಮಹಾರಾಜ ವರಾಹಸ್ವಾಮಿ ದೇವಸ್ಥಾನಕ್ಕೆ ಭಕ್ತರ ವೇಷದಲ್ಲಿ ಬಂದು ಹಾಡಹಗಲೇ ಕಾಣಿಕೆ ಡಬ್ಬಿ ಕಳವು ಮಾಡಲು ಯತ್ನಿಸಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ. 

ಕಂಬದಕೋಣೆ ನಿವಾಸಿ ಕರುಣಾಕರ ದೇವಾಡಿಗ ಹಾಗೂ ಆತನ ಅಪ್ರಾಪ್ತ ಪತ್ನಿ‌ ಬಂಧಿತ ದಂಪತಿ. ದೇವಸ್ಥಾನದಲ್ಲಿ ಭಕ್ತರ ಸಂಖ್ಯೆ ವಿರಳವಾಗಿದ್ದು, ಪೂಜಾ ಕೆಲಸ ಮುಗಿಸಿ ಅರ್ಚರು ಗರ್ಭಗುಡಿಗೆ ಬಾಗಿಲು ಹಾಗಿ ಮನೆಗೆ ಹೋಗಿದ್ದು, ಈ ಸಂದರ್ಭದಲ್ಲಿ ದಂಪತಿ ದೇಗುಲಕ್ಕೆ ಭಕ್ತರಂತೆ ಬಂದಿದ್ದರು. ಹೊರಗಡೆ ಇದ್ದ ದೇವರಿಗೆ ಕೈಮುಗಿದು ದೇವಸ್ಥಾನ ಪ್ರವೇಶಿಸಿ ಕಾಣಿಕೆ ಡಬ್ಬಿ ಒಡೆಯುವ ಪ್ರಯತ್ನ ಮಾಡಿ ವಿಫಲರಾದರು. ನಂತರ ಗರ್ಭಗುಡಿ ಪ್ರವೇಶಿಸಿ, ಬರಿಗೈಯಲ್ಲಿ ಮರಳಿದ್ದು, ಕಳ್ಳರ ಸಂಪೂರ್ಣ ಚಲನವಲನ ದೇವಸ್ಥಾನದ ಸಿಸಿ ಟಿವಿಯಲ್ಲಿ ದಾಖಲಾಗಿದೆ.

ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸತೀಶ್ ಎಂ.ನಾಯಕ್ ಗಂಗೊಳ್ಳಿ ಠಾಣೆಗೆ ದೂರು ನೀಡಿದ್ದು, ಸಿಸಿಟಿವಿ ದೃಶ್ಯಾವಳಿ ಆಧರಿಸಿ ಪೊಲೀಸರು ದಂಪತಿಯನ್ನು ಬಂಧಿಸಿದ್ದಾರೆ. ಕರುಣಾಕರ ದೇವಾಡಿಗ ಭದ್ರಾವತಿಯ ಅಪ್ರಾಪ್ತೆಯನ್ನು ಮದುವೆಯಾಗಿ, ಕಂಬದಕೋಣಿಯಲ್ಲಿ ವಾಸವಾಗಿದ್ದ ಎನ್ನಲಾಗಿದೆ. ಅಪ್ರಾಪ್ತೆಯನ್ನು ಮದುವೆಯಾದ ಬಗ್ಗೆಯೂ ಪ್ರಕರಣ ದಾಖಲಾಗಿದೆ.

ಗಂಗೊಳ್ಳಿ ಪೊಲೀಸರು ಆರೋಪಿಗಳಿಬ್ಬರನ್ನೂ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಪತಿ ಕರುಣಾಕರ ದೇವಾಡಿಗನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಅಪ್ರಾಪ್ತ ಪತ್ನಿಯನ್ನು ರಿಮ್ಯಾಂಡ್ ಹೋಂ ಗೆ ಸೇರಿಸಲಾಗಿದೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು