7:57 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಅವ್ಯಾಹತ ಮಳೆ: ಕೊಪ್ಪದ ಹೆಗ್ಗಾರು ಕೂಡಿಗೆಯಲ್ಲಿ ಕೊಚ್ಚಿ ಹೋದ ರಸ್ತೆ; ಸಂಪರ್ಕ ಕಡಿತ, ಜನ ಸಾಮಾನ್ಯರ ಪರದಾಟ

12/08/2022, 20:46

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ಮೂಡಿಗೆರೆ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಕೊಪ್ಪ ತಾಲೂಕಿನ ಹೆಗ್ಗಾರು ಕೂಡಿಗೆಯಲ್ಲಿ ಕೊಚ್ಚಿ ಹೋದ ರಸ್ತೆ, ಸಂಪರ್ಕ ಕಡಿತಗೊಂಡಿದೆ.

ಮೂಡಿಗೆರೆ ತಾಲೂಕಿನಲ್ಲಿ ಅಂಗನವಾಡಿಯಿಂದ ಹತ್ತನೇ ತರಗತಿವರೆಗೆ ತಹಶೀಲ್ದಾರ್ ರಜೆ ನೀಡಿದ್ದಾರೆ. ಮಾಧ್ಯಮಗಳಿಗೆ ರಜೆ ಬಗ್ಗೆ ಮಾಹಿತಿ ನೀಡಿದ ತಹಶೀಲ್ದಾರ್ ನಾಗರಾಜ್, ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ರಜೆ ಘೋಷಣೆ ಮಾಡಲಾಗಿದೆ ಎಂದರು. 

ಕಾಫಿನಾಡ ಮಲೆನಾಡು ಭಾಗದಲ್ಲಿ ಮಳೆ-ಗಾಳಿ ಮುಂದುವರಿದಿದೆ. ಹೆಗ್ಗಾರು ಕೂಡಿಗೆಯಲ್ಲಿ ರಸ್ತೆ ಕೊಚ್ಚಿ ಹೋಗಿ ಸಂಪರ್ಕ ಕಡಿತಗೊಂಡಿದೆ.

ಕೊಪ್ಪ ತಾಲೂಕಿನ ಹೆಗ್ಗಾರುಕೂಡಿಗೆ ಗ್ರಾಮದ ಮೇಗೂರು, ಕೊಗ್ರೆ, ತಲವಾನೆ ಸೇರಿ ಹತ್ತಾರು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದೆ.


ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿ ವಿದ್ಯಾರ್ಥಿಗಳು, ಜನಸಾಮಾನ್ಯರ ಪರದಾಟ ನಡೆಸಬೇಕಾಯಿತು. ಸ್ಥಳೀಯರು ಪಿಡಬ್ಲ್ಯುಡಿ ಇಂಜಿನಿಯರ್  ಅವರನ್ನು ತರಾಟೆಗೆ ತೆಗೆದುಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು