1:31 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಇನ್ನು ಮುಂದೆ ಸಾಲ ವಸೂಲಿ ವೇಳೆ ಧಮ್ಕಿ ಹಾಕುವಂತಿಲ್ಲ: ಬ್ಯಾಂಕ್ ಏಜೆಂಟರಿಗೆ ಆರ್ ಬಿಐ ಖಡಕ್ ಸೂಚನೆ

13/08/2022, 11:49

ಮುಂಬೈ(reporterkarnatak.com): ಸಾಲ ವಸೂಲಾತಿ ವೇಳೆ ಬ್ಯಾಂಕಿಂಗ್ ರಿಕವರಿ ಏಜೆಂಟರು ಗ್ರಾಹಕರಿಗೆ ಬೆದರಿಕೆ ಹಾಕುವಂತಿಲ್ಲ ಮತ್ತು ಬೆಳಗ್ಗೆ 8 ಗಂಟೆಗೆ ಮೊದಲು ಮತ್ತು ಸಂಜೆ 7 ಗಂಟೆಯ ನಂತರ ಕರೆ ಮಾಡುವಂತಿಲ್ಲ ಎಂದು ಆರ್ ಬಿಐ ಖಡಕ್ ವಾರ್ನಿಂಗ್ ಕೊಟ್ಟಿದೆ.

ಹಣ ರಿಕವರಿಗಾಗಿ ಏಜೆಂಟರು ಸ್ವೀಕಾರ್ಹವಲ್ಲದ ವರ್ತನೆ ತೋರುತ್ತಿದ್ದಾರೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಹೊಸ ಸುತ್ತೋಲೆ ಹೊರಡಿಸಿದ ಆರ್ ಬಿಐ, ಏಜೆಂಟರಿಗೆ ಗ್ರಾಹಕರ ಜೊತೆಗಿನ ವರ್ತನೆ ಬಗ್ಗೆ ಎಚ್ಚರಿಕೆ ನೀಡಿದೆ.

ಸಾಲ ವಸೂಲಿ ಸಂದರ್ಭದಲ್ಲಿ ಸಂಸ್ಥೆಗಳ ಪ್ರತಿನಿಧಿಗಳು ಬಲಪ್ರಯೋಗ, ಕಿರುಕುಳ ನೀಡುವಂಥ ಕ್ರಮಗಳನ್ನು ಅನುಸರಿಸಬಾರದು. ಅನಪೇಕ್ಷಿತ ಮೆಸೇಜ್ ಗಳು, ಅನಾಮಧೇಯರ ಹೆಸರಿನಲ್ಲಿ ಬೆಳಗ್ಗೆ 8 ಗಂಟೆಯಿಂದ ಮೊದಲು ಮತ್ತು ರಾತ್ರಿ 7 ಗಂಟೆಯ ಬಳಿಕ ಕರೆ ಮಾಡಬಾರದು ಎಂದು ತನ್ನ ಸುತ್ತೋಲೆಯಲ್ಲಿ ಆರ್‌ಬಿಐ ಸೂಚಿಸಿದೆ.

ಗ್ರಾಹಕರ ಜೊತೆಗೆ ರಿಕವರಿ ಏಜೆಂಟರು ಸರಿಯಾಗಿ ನಡೆದುಕೊಳ್ಳಬೇಕು. ಯಾವುದೇ ಗ್ರಾಹಕರ ಜೊತೆಗೆ ಅನುಚಿತ ವರ್ತನೆ ತೋರುವುದು ಸರಿಯಲ್ಲ. ಸರಿಯಾದ ರೀತಿಯಲ್ಲಿ ಸಾಲ ವಸೂಲಾತಿ ಮಾಡಬೇಕು. ನಿಂದಿಸುವುದು ಅಥವಾ ಮಾನಸಿಕ-ದೈಹಿಕ ಕಿರುಕುಳ ನೀಡುವುದು ಕಂಡುಬಂದರೆ ಅಂಥವರ ವಿರುದ್ಧ ಕಠಿಣ ಕ್ರಮ ಕೂಗೊಳ್ಳಬೇಕಾಗುತ್ತದೆ ಎಂದು ಕಠಿಣ ಸಂದೇಶ ರವಾನಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು