12:18 PM Friday3 - May 2024
ಬ್ರೇಕಿಂಗ್ ನ್ಯೂಸ್
ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:…

ಇತ್ತೀಚಿನ ಸುದ್ದಿ

3 ವರ್ಷದಲ್ಲಿ 36 ಸಾವಿರ ಕಿಮೀ ಸೈಕಲ್ ತುಳಿದ ಮಾಜಿ ಯೋಧ!: ಕೊಟ್ಟಿಗೆಹಾರದಲ್ಲಿ ಮಲೆನಾಡಿಗರ ಜತೆ ಸಂಭ್ರಮ!! 

13/08/2022, 14:12

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಇಡೀ ದೇಶವೇ ಹರ್ ಘರ್ ತಿರಂಗಾ ಅಭಿಯಾನದ ಮೂಲಕ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಸುಮಧುರ ಘಳಿಗೆಯ ಆಚರಣೆಯಲ್ಲಿ ಖುಷಿಯಲ್ಲಿದೆ. ದೇಶವಾಸಿ ಪ್ರತಿಯೊಬ್ಬರು ಮನೆ-ಅಂಗಡಿ-ಆಟೋ-ಬೈಕ್‍ಗಳ ಮೇಲೆ ಭಾರತದ ಬಾವುಟ ರಾರಾಜಿಸುತ್ತಿದೆ. ಆದರೆ, ಮಲೆನಾಡಿಗರು 3 ವರ್ಷದಲ್ಲಿ 36 ಸಾವಿರ ಸೈಕಲ್ ತುಳಿದು ದೇಶದ ಜನರಲ್ಲಿ ಜಾಗೃತಿ ಮೂಡಿಸುತ್ತಿರೋ ಗುಜರಾತ್ ಮೂಲದ ಮಾಜಿ ಯೋಧನ ಜೊತೆ ಹರ್ ಘರ್ ತಿರಂಗಾ ಅಭಿಯಾನ ಆಚರಿಸಿ ಅವರ ಕೈನಲ್ಲೇ ಮನೆ ಮೇಲೆ ಬಾವುಟ ಕಟ್ಟಿಸಿ ಮತ್ತಷ್ಟು ಸಂಭ್ರಮಿಸಿದ್ದಾರೆ. ಗುಜರಾತ್ ಮೂಲದ ಬಿ.ಎಸ್.ಎಫ್. (ಬಾರ್ಡರ್ ಸೆಕ್ಯೂರಿಟ್ ಫೋರ್ಸ್) ಮಾಜಿ ಯೋಧ ಬ್ರಿಜೇಶ್ ಶರ್ಮಾ ಕಳೆದ ಮೂರು ವರ್ಷಗಳಿಂದ ಸೈಕಲ್ ಜಾಥಾ ಮಾಡುತ್ತಿದ್ದು, ಈವರೆಗೆ 36 ಸಾವಿರ ಕಿ.ಮೀ. ಸೈಕಲ್ ತುಳಿದಿದ್ದಾರೆ. ಹೀಗೆ ಬಂದವರು ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರಕ್ಕೂ ಭೇಟಿ ನೀಡಿದ್ದರು. ಈ ವೇಳೆ, ಕೊಟ್ಟಿಗೆಹಾರದ ಸಂಜಯ್ ಕೊಟ್ಟಿಗೆಹಾರ ಎಂಬುವರು ಈ ಮಾಜಿ ಯೋಧನಿಗೆ ತಮ್ಮ ಹೋಂ ಸ್ಟೇನಲ್ಲಿ ತಂಗಲು ಅವಕಾಶ ನೀಡಿ, ಇಂದು ಬೆಳಗ್ಗೆ ಹರ್ ಘರ್ ತಿರಂಗಾ ಅಭಿಯಾನದ ಹಿನ್ನೆಲೆ ಅವರ ಕೈನಲ್ಲೇ ತಮ್ಮ ಮನೆ ಮೇಲೆ ಬಾವುಟ ಕಟ್ಟಿಸಿ ಆನಂದಿಸಿದ್ದಾರೆ. ಈ ಮಾಜಿ ಯೋಧ ಬ್ರಿಜೇಶ್ ಶರ್ಮಾ, ಮೂರು ವರ್ಷಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದ ದಿನದಂದು ಸೈಕಲ್ ಜಾಥಾ ಆರಂಭಿಸಿದ ಅವರು ಇಂದಿಗೂ ನಿಲ್ಲಿಸಿಲ್ಲ. ಮೂರು ವರ್ಷಗಳಿಂದ ಅವರು ಸೈಕಲ್ ತುಳಿಯುತ್ತಿದ್ದಾರೆ. ಸಿಂಗಲ್ ಯೂಸ್ ಪ್ಲಾಸ್ಟಿಕ್‍ನಿಂದ ಏನೇನು ತೊಂದರೆಯಾಗಲಿದೆ ಎಂಬುದನ್ನ ಸಭೆ-ಸಮಾರಂಭ, ಶಾಲಾ-ಕಾಲೇಜಿಗೆ ಹೋಗಿ ಮಕ್ಕಳು ಹಾಗೂ ದೊಡ್ಡವರಿಗೂ ಮನವರಿಕೆ ಮಾಡುತ್ತಿದ್ದಾರೆ. ಸಿಂಗಲ್ ಯೂಸ್ ಪ್ಲಾಸ್ಟಿಕ್ ಬಳಕೆಯನ್ನ ಸಂಪೂರ್ಣವಾಗಿ ಬಿಡಬೇಕೆಂದು ಮನವಿ ಮಾಡುತ್ತಿದ್ದಾರೆ.

ಸ್ವಚ್ಛ ಭಾರತ್ ಬಗ್ಗೆಯೂ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಜೊತೆಗೆ, ರೈತ ಈ ದೇಶದ ಬೆನ್ನೆಲುಬು ಎಂದು ರೈತರಿಗೆ ಮಾರ್ಗದರ್ಶನ ನೀಡುತ್ತಿದ್ದಾರೆ. ಹೊಲಗದ್ದೆ-ತೋಟಗಳಲ್ಲಿ ಮಣ್ಣಿನ ಸವಕಳಿಯನ್ನ ಹೇಗೆ ತಡೆಯುವುದು ಎಂದು ರೈತರಿಗೂ ಮಾಹಿತಿ ನೀಡುತ್ತಿದ್ದಾರೆ. ಈ ರೀತಿ ದೇಶದ ಸರ್ವತೋಮುಖ ಅಭಿವೃದ್ಧಿಗಾಗಿ ಮೂರು ವರ್ಷಗಳಿಂದ ಸೈಕಲ್ ತುಳಿಯುತ್ತಿರೋ ಮಾಜಿ ಯೋಧನ ದೇಶಪ್ರೇಮಕ್ಕೆ ಕೊಟ್ಟಿಗೆಹಾರದ ಜನ ಕೂಡ ಫುಲ್ ಫಿದಾ ಆಗಿ ಅವರನ್ನ ಕೊಟ್ಟಿಗೆಹಾರದಲ್ಲೇ ಉಳಿಸಿಕೊಂಡು, ಸ್ನೇಹಿತನಂತೆ ಸಂತೈಸಿ ಬೀಳ್ಕೊಟ್ಟಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು