2:44 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಕಾವ್ಯವನ್ನು ಅನುಭವಿಸಿ ಬರೆದರೆ ಉತ್ತಮ ಕವನ ಬರುತ್ತೆ: ಪತ್ರಕರ್ತ ರೇಮಂಡ್ ಡಿ.ಕುನ್ಹ ತಾಕೊಡೆ

15/08/2022, 18:57

ಮಂಗಳೂರು(reporterkarnataka.com):ಪ್ರೇರಣಾತ್ಮಕವಾಗಿ ಬರೆಯುವ ಸಾಹಿತಿಗಳು  ನಡು ನಡುವೆ ವಿರಾಮ ತೆಗೆದು ಕೊಂಡು ಅಭ್ಯಸಿಸಿ ಬರೆಯುವ ಹವ್ಯಾಸ ಇಟ್ಟುಕೊಳ್ಳಬೇಕು  ಆ ಮೂಲಕ ಒಂದು ಸೃಜನಾತ್ಮಕ ಸಾಹಿತ್ಯ ರಚಿಸಲು ಸಾಧ್ಯ ಎಂದು ಹಿರಿಯ ಪತ್ರಕರ್ತ ರೇಮಂಡ್ ಡಿ.ಕುನ್ಹ ತಾಕೋಡೆ ಹೇಳಿದರು .  

ಅವರು  ಕರ್ನಾಟಕ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ವತಿಯಿಂದ ನಗರದ ಕದ್ರಿ ಬಾಲಭವನದಲ್ಲಿ ಸ್ವಾತಂತ್ರ್ಯಅಮೃತ ಮಹೋತ್ಸವದ ಅಂಗವಾಗಿ ಆಯೋಜಿಸಿದ ಭಾರತಾಂಬೆಗೆ ಕನ್ನಡದಾರತಿ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. 

ಈಗ ಸಂಘಟಕರು, ಸಂಶೋಧಕರು ಮತ್ತು ಸಾಹಿತಿಗಳು ಈ ಮೂರು ವರ್ಗದವರಿಂದ ಸಾಹಿತ್ಯ ಸೇವೆ ನಡೀತಿದೆ. ಇದರಲ್ಲಿ ಸಾಹಿತಿಗಳು ಸಂಶೋಧನೆ ಮತ್ತು ಸಂಘಟನೆ ಮಾಡಿದ್ರೆ ಉತ್ತಮ ಸಾಹಿತ್ಯ ಬರುತ್ತದೆ ಎಂದರು.   

ಇದೇ ಸಂದರ್ಭದಲ್ಲಿ ಸಾಹಿತ್ಯ ಕ್ಷೇತ್ರದಲ್ಲಿ ಗಝಲ್ ಕವಿ ಹಾಗೂ ಮುಕ್ತಕ ಕವಿ ಎಂದೇ ಜನಪ್ರಿಯರಾದ ಡಾ. ಸುರೇಶ್ ನೆಗಳಗುಳಿ ಅವರನ್ನು ಸನ್ಮಾನಿಸಲಾಯಿತು. 

ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿದ್ದ ಗುಣಾಜೆ ರಾಮಚಂದ್ರ ಭಟ್ ಮಾತನಾಡಿ, ಕವಿತೆ ಕಟ್ಟುತ್ತಾ ಹೋದಂತೆ ಅದು ಹುಟ್ಟುವುದು, ಕವನವನ್ನು ಮೊದಲ ಬಾರಿಗೆ ಓದಿದಾಗ ಎಲ್ಲಾ ಅರ್ಥವಾಗದೆ ಮರಳಿ ಓದಿಸಬೇಕು.  ಹಾಗೆಂದು ಕವನಗಳು ಅರ್ಥ ಮಾಡಲು ತುಂಬಾ ಕಷ್ಟವಾಗಿರಲೂಬಾರದು.  ಕವಿಗಳು ನಿರಂತರ ಅಧ್ಯಯನ ಮಾಡುತ್ತಿರಬೇಕು ,  ಶಬ್ಧ ಸಂಪತ್ತನ್ನು ಗಳಿಸಿ ಜೀವನಾನುಭವ ಹೊಂದಿರಬೇಕೆಂದು ಹೇಳಿದರು.    

 KSSAP ಅಧ್ಯಕ್ಷೆ ರಾಣಿ ಪುಷ್ಪಲತಾ ದೇವಿ ಸ್ವಾಗತಿಸಿ ಪ್ರಾಸ್ತಾವನೆಗೈದರು. NSCDF ಅಧ್ಯಕ್ಷ ಗಂಗಾಧರ್ ಗಾಂಧಿ ಹಾಗೂ ಕವಯತ್ರಿ ರೇಖಾ ಸುದೇಶ್ ರಾವ್  ಉಪಸ್ಥಿತರಿದ್ದರು. ರೇಶ್ಮಾ ಶೆಟ್ಟಿ ಗೋರೂರು ನಿರೂಪಿಸಿದರು. ನಂತರ ನಡೆದ ಕವಿಗೋಷ್ಠಿಯಲ್ಲಿ ವಿವಿಧ ಜಿಲ್ಲೆಯ ಸುಮಾರು 30 ಕ್ಕೂ ಹೆಚ್ಚು ಕವಿಗಳು ತಮ್ಮ ಸ್ವರಚಿತ ಕವನ ವಾಚನ ಮಾಡಿದರು.  ವಿವಿಧ ಕಲಾ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಗೀತ ಗಾಯನ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು