12:15 PM Thursday18 - December 2025
ಬ್ರೇಕಿಂಗ್ ನ್ಯೂಸ್
ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಕುದ್ರೋಳಿ ದೇಗುಲದಲ್ಲಿ 900 ಕೆಜಿ ಧಾನ್ಯ ಬಳಸಿ ರಚಿಸಿದ ತ್ರಿವರ್ಣ ಧ್ವಜಕ್ಕೆ ಮುಖ್ಯಮಂತ್ರಿ ಮೆಚ್ಚುಗೆ: ಜಿಲ್ಲಾಧಿಕಾರಿ ಶ್ಲಾಘನೆ

15/08/2022, 23:15

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ನಗರದ ಕುದ್ರೋಳಿಯ ಶ್ರೀ ಗೋಕರ್ಣಾನಾಥ ಕ್ಷೇತ್ರದ ಮುಂಭಾಗ ಗುರುಬೆಳದಿಂಗಳು ಸಮಿತಿಯ 30 ಸದಸ್ಯರು ಸೇರಿ 900 ಕೆಜಿ ಧಾನ್ಯಗಳನ್ನು ಬಳಸಿ ರಚಿಸಿದ ತ್ರಿವರ್ಣ ಧ್ವಜದ ಕುರಿತು ಸೋಮವಾರ ದೇಗುಲಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಮೆಚ್ಚುಗೆ ವ್ಯಕ್ತಪಡಿಸಿದರು.


ಗುರುಬೆಳದಿಂಗಳು ಸಮಿತಿ ಹಾಗು ದೇಗಲದ ಆಡಳಿತ ಸಮಿತಿಯ ಸದಸ್ಯರ ವಿನೂತನವಾದ ಪ್ರಯತ್ನಕ್ಕೆ ಜಿಲ್ಲಾಧಿಕಾರಿ ಸಂತಸಪಟ್ಟರು.


ಇದೇ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಅವರು ಧಾನ್ಯಗಳಿಂದ ರಚಿಸಲ್ಪಟ್ಟ ಚಿತ್ರಾಕೃತಿ ಕಂಡು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದರು.

ಈ ಬಾರಿ 5 ಲಕ್ಷಕ್ಕಿಂತ ಹೆಚ್ಚು ಜನ ತಮ್ಮ ಮನೆ-ಕಚೇರಿಗಳಲ್ಲಿ ತ್ರಿವರ್ಣ ಧ್ವಜ ಹಾರಿಸಿ ದಕ್ಷಿಣ ಕನ್ನಡ ಜನತೆ ದೇಶಾಭಿಮಾನವನ್ನು ತೋರಿಸಿದ್ದಾರೆ. ಎಲ್ಲರಿಗೂ 75ನೇ ಅಮೃತ ಮಹೋತ್ಸವದ ಸ್ವಾತಂತ್ರ್ಯೋತ್ಸವಕ್ಕೆ ಶುಭಾಶಯಗಳು ಎಂದು ಅವರು ನುಡಿದರು.

ಜಿಲ್ಲಾಧಿಕಾರಿಯವರು ಸಾಮಾನ್ಯರಂತೆ  ದೇವರ ದರ್ಶನ ಪಡೆದಿರುವುದು ವಿಶೇಷವಾಗಿತ್ತು.


ಈ ವೇಳೆ ಗುರುಬೆಳದಿಂಗಳು ಫೌಂಡೇಶನ್‌ನ ಅಧ್ಯಕ್ಷ ಹಾಗೂ ಕ್ಷೇತ್ರದ ಕೋಶಾಧಿಕಾರಿ ಆರ್.ಪದ್ಮರಾಜ್‌ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು