7:56 PM Tuesday26 - November 2024
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ… ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಗೆ ಜಯ: ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ​ ಮಹಾರಾಷ್ಟ್ರ: ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ? ಆರೆಸ್ಸೆಸ್ ಮುಖ್ಯಸ್ಥ ಡಾ. ಭಾಗವತ್ ಡಿ. 7ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ… ಬೆಂಗಳೂರು ಮತ್ತು ಚೆನ್ನೈಗೆ ಆಸ್ಟ್ರೇಲಿಯನ್ ಡಿಜಿಟೆಕ್ ಟ್ರೇಡ್ ಮಿಷನ್ ಭೇಟಿ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಆನೆ ದಾಳಿಗೆ ರೈತ ಬಲಿ; ಮೃತದೇಹವನ್ನು ಕಾಡಿನಲ್ಲಿ ಎಳೆದಾಡಿದ ಒಂಟಿ ಸಲಗ

15/08/2022, 23:33

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಡಾನೆ ದಾಳಿಯಿಂದ ವ್ಯಕ್ತಿ ಸಾವನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಾರ್ಗೋಡು ಗ್ರಾಮದಲ್ಲಿ ನಡೆದಿದೆ. ಮೃತರನ್ನ ಆನಂದ್ ದೇವಾಡಿಗ(52) ಎಂದು ಗುರುತಿಸಲಾಗಿದೆ. 

ಮೃತ ಆನಂದ್ ದೇವಾಡಿಗ ಮನೆಯ ಹಿಂಭಾಗದಲ್ಲಿ ಹಸುವನ್ನು ಹುಡುಕಿಕೊಂಡು ಹೋದಾಗ ಈ ದುರ್ಘಟನೆ ಸಂಭವಿಸಿದೆ. ದಾಳಿ ಮಾಡಿದ ಕಾಡಾನೆ ಸುಮಾರು ಅರ್ಧ ಕಿ.ಮೀ ಗಿಂತಲೂ ಹೆಚ್ಚು ದೂರ ಮೃತ ದೇಹವನ್ನು ಎಳೆದೊಯ್ದಿದೆ. ಕಾಡಿನ ಒಳಗೆ ಮೃತ ಆನಂದ್ ಅವರ ದೇಹದ ಅಂಗಾಗಗಳು ಕಾಡಿನ ಸುಮಾರು ಅರ್ಧ ಕಿ.ಮೀ. ವ್ಯಾಪ್ತಿಯಲ್ಲಿ ಅಲ್ಲಲ್ಲೆ ಬಿದ್ದಿವೆ. ಮೃತದೇಹ ಇರುವ ಜಾಗಕ್ಕೂ ಚಪ್ಪಲಿ ಇರುವ ಜಾಗಕ್ಕೂ ಸುಮಾರು ಅರ್ಧ ಕಿ.ಮೀ ದೂರವಿದೆ. ಅಷ್ಟೆ ಅಲ್ಲದೆ ತಲೆ ಮೆದುಳು, ಮೂಳೆಯೂ ಒಂದೊಂದು ಜಾಗದಲ್ಲಿ ಬಿದ್ದಿದೆ.  ಮೃತದೇಹವನ್ನ ಕಾಡಿನಲ್ಲಿ ಎಳೆದು ತಂದಿರುವುದರಿಂದ ಕಾಡಿನ ಮರಗಿಡಿಗಳಿಗೆ ಸಿಲುಕಿ ಮೃತದೇಹದ ಮೇಲೆ ಯಾವುದೇ ಬಟ್ಟೆ ಇಲ್ಲದಂತಾಗಿದೆ. ಛಿದ್ರವಾಗಿರುವ  ಮೃತದೇಹವನ್ನ ಕಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆ ನಿನ್ನೆ ಸಂಜೆಯೂ ನಡೆದರೂ ಬೆಳಗ್ಗೆವರೆಗೂ ಯಾರಿಗೂ ಮಾಹಿತಿ ಇರಲಿಲ್ಲ. ಮನೆಯವರು ಆನಂದ್ ಎಲ್ಲೋ ಹೋಗಿದ್ದಾರೆ. ಬರುತ್ತಾರೆ ಎಂದು ಸುಮ್ಮನಾಗಿದ್ದಾರೆ. ಆದರೆ, ಬೆಳಗ್ಗೆ ಎಲ್ಲೂ ಇಲ್ಲದಾಗ ಸ್ಥಳಿಯರು ಎರಡು ಗುಂಪುಗಳಾಗಿ ಮನೆ ಹಿಂದಿನ ಕಾಡಿನಲ್ಲಿ ಹುಡುಕಾಡಿದ್ದಾರೆ. ಆಗ ಮೃತದೇಹ ಪತ್ತೆಯಾಗಿದೆ.


ಬೆಳಗ್ಗೆ ಸ್ಥಳಿಯರು ಸ್ಥಳಕ್ಕೆ ಬರುವವರೆಗೂ ಆನೆ ಮೃತದೇಹವಿದ್ದ ಸ್ಥಳದಲ್ಲೇ ಇತ್ತಂತೆ. ಸ್ಥಳಿಯರು ಬಂದ ಬಳಿಕ ಆನೆ ಹೋಗಿದೆ.ಮೂಡಿಗೆರೆ ತಾಲೂಕಿನ ಮಲೆನಾಡು ಭಾಗದಲ್ಲಿ ಕಾಡಾನೆ ಹಾವಾಳಿ ಮಿತಿಮೀರಿದೆ. ಕಳೆದೊಂದು ವಾರದಿಂದ 13 ಕಾಡಾನೆಗಳ ಹಿಂಡು ತಾಲೂಕಿನಾದ್ಯಂತ ಅಲ್ಲಲ್ಲೇ ದಾಂದಲೆ ನಡೆಸುತ್ತಿವೆ. ಈ ಬಗ್ಗೆ ಅರಣ್ಯ ಅಧಿಕಾರಿಗಳಿಗೆ ಮಾಹಿತಿ ಇದ್ದರೂ ಕೂಡ ಪಟಾಕಿ ಸಿಡಿಸುವುದ ಬಿಟ್ಟು ಅಧಿಕಾರಿಗಳು ಏನೂ ಮಾಡುವುದಿಲ್ಲ ಎಂದು ಸ್ಥಳಿಯರು ಅರಣ್ಯ ಇಲಾಖೆ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು