12:33 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಮಂಗಳೂರು ಉತ್ತರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ರಾಘವೇಂದ್ರ ಆರ್.ಕೋಟೆ ಅಧಿಕಾರ ಸ್ವೀಕಾರ

24/06/2021, 15:54

ಮಂಗಳೂರು(reporterkarnataka news): ಮಂಗಳೂರು ಉತ್ತರ ಪೊಲೀಸ್ ಠಾಣೆಯ ನೂತನ ಇನ್ಸ್ಪೆಕ್ಟರ್ ಆಗಿ ರಾಘವೇಂದ್ರ ಆರ್. ಕೋಟೆ ಅವರು ಅಧಿಕಾರ ಸ್ವೀಕರಿಸಿದರು.

ಉಡುಪಿ ಜಿಲ್ಲೆಯ  ಬೈಂದೂರು ತಾಲೂಕಿನ ಬಾಡದವರಾದ ಅವರು 1997ರಲ್ಲಿ ಪೊಲೀಸ್ ಇಲಾಖೆ ಗೆ ಸೇರ್ಪಡೆಗೊಂಡಿದ್ದರು. ನಂತರ ಮೂಲ್ಕಿ, ಉಡುಪಿ ನಗರ, ಶಂಕರನಾರಾಯಣ ಠಾಣಿಗಳಲ್ಲಿ ಕರ್ತವ್ಯ ನಿರ್ವಹಿಸಿ, 2007ರಲ್ಲಿ ರಾಜ್ಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇರ ನೇಮಕಾತಿ ಹೊಂದಿ ಬೆಂಗಳೂರಿನ ಯಶವಂತಪುರ,ಆನೆಕಲ್, ಮಾದನಾಯಕಹಳ್ಳಿ, ಸಿ.ಸಿ.ಬಿ.,ಹೆಬ್ಬಾಳ ಸಂಚಾರ, ಪಾಪಪಾಳ್ಯ ಠಾಣೆಗಳಲ್ಲಿ ಉತ್ತಮ ಸೇವೆ ಸಲ್ಲಿಸಿದರು. 2020ರಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಆಗಿ ಮುಂಬಡ್ತಿ ಹೊಂದಿ ಬೆಂಗಳೂರಿನ ಲೋಕಾಯುಕ್ತ ಎಸ್.ಐ.ಟಿ ವಿಂಗ್ ನಲ್ಲಿ ಕರ್ತವ್ಯದಲ್ಲಿದ್ದರು.

ಇವರು ಕರ್ತವ್ಯದ ಅವಧಿಯಲ್ಲಿ ತೋರಿದ ಸಾಧನೆ ಗೆ 2020-21ನೇ ಸಾಲಿನಲ್ಲಿ ಮುಖ್ಯಮಂತ್ರಿಯವರ ಪದಕ ಪಡೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು