ಇತ್ತೀಚಿನ ಸುದ್ದಿ
ರಾಜ್ಯ ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಗಳ ಪ್ರಮಾಣ ವಚನ ಸ್ವೀಕಾರ
17/08/2022, 09:28
ಬೆಂಗಳೂರು(reporterkarnataka.com): ಕರ್ನಾಟಕ ಹೈಕೋರ್ಟ್ ಗೆ ನೂತನವಾಗಿ ನೇಮಕವಾದ ಹೆಚ್ಚುವರಿ ನ್ಯಾಯಮೂರ್ತಿಗಳಾದ ಅನಿಲ್ ಭೀಮಸೇನ ಕಟ್ಟಿ, ಗುರುಸಿದ್ದಯ್ಯ ಬಸವರಾಜ, ಚಂದ್ರಶೇಖರ ಮೃತ್ಯುಂಜಯ ಜೋಶಿ, ಉಮೇಶ ಮಂಜುನಾಥ ಭಟ್ಟ ಅಡಿಗ ಹಾಗೂ ತಲಕಾಡು ಗಿರಿಗೌಡ ಶಿವಶಂಕರೇಗೌಡ ಅವರು ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಹೆಚ್ಚುವರಿ ನ್ಯಾಯಮೂರ್ತಿಗಳಿಗೆ ಗೌಪ್ಯತಾ ಪ್ರಮಾಣವಚನ ಬೋಧಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರುಗಳಾದ ವಿ.ಸುನಿಲ್ ಕುಮಾರ್, ಡಾ.ಕೆ.ಸುಧಾಕರ್, ಬಿ.ಸಿ.ನಾಗೇಶ್, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಶಾಸಕರಾದ ಎಸ್.ಆರ್.ವಿಶ್ವನಾಥ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಸಿ.ಟಿ.ರವಿ, ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕರಾದ ಜಗದೀಶ್ ಶೆಟ್ಟರ್, ಮಾಜಿ ಸಚಿವರು ಹಾಗೂ ಶಾಸಕರಾದ ಸುರೇಶ್ ಕುಮಾರ್, ಅರವಿಂದ ಲಿಂಬಾವಳಿ, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ವಂದಿತಾ ಶರ್ಮಾ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಷಿ, ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳು ಹಾಗೂ ನ್ಯಾಯಾಧೀಶರುಗಳು ಉಪಸ್ಥಿತರಿದ್ದರು.