9:02 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಪೆರ್ಡೂರಿನಲ್ಲಿ ಬೈಕ್ ಮತ್ತು ಕಾರು ನಡುವೆ ಅಪಘಾತ: ಗಾಯಾಳು ಖ್ಯಾತ ಕಟ್ಟಡ ವಿನ್ಯಾಸಕಾರ ಮಧ್ವರಾಜ್ ಭಟ್ ಸಾವು

17/08/2022, 10:14

ಪೆರ್ಡೂರು(reporterkarnataka.com): ಮಣಿಪಾಲದ ಆರ್ಕಿಟೆಕ್ಟ್ ಡಿಪಾರ್ಟ್ಮೆಂಟ್ ನ ನಿವೃತ್ತ ಉದ್ಯೋಗಿ, ಕಟ್ಟಡಗಳ ವಿನ್ಯಾಸಕಾರ ಮಧ್ವರಾಜ್ ಭಟ್ ರವರು ಇಂದು ಬೆಳಿಗ್ಗೆ ನಿಧನರಾದರು.

ಮಧ್ವರಾಜ್ ಅವರು ಆ‌.13ರಂದು ಪೆರ್ಡೂರಿನ ಪಕ್ಕಾಲು ಬಳಿ ನಡೆದ ಬೈಕ್ ಮತ್ತು ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಧ್ವರಾಜ್ ಭಟ್ ಅವರು ಇಂದು ಕೊನೆಯುಸಿರೆಳೆದಿದ್ದಾರೆ.

ಮಧ್ವರಾಜ್ ಭಟ್ ಅವರು ಶ್ರೀಕೃಷ್ಣ ಮಠದ ಸುತ್ತು ಪೌಳಿಯ ನಿರ್ಮಾಣ ಕಾರ್ಯದಲ್ಲಿ, ರಾಜಾಂಗಣ, ಗೀತಾ ಮಂದಿರ ನಿರ್ಮಾಣ ಸಂಧರ್ಭ ವಿಶೇಷ ಮುತುವರ್ಜಿ ವಹಿಸಿದ್ದರು. ಇವರಿಗೆ ಪೇಜಾವರ ಹಿರಿಯ ಶ್ರೀಗಳು  ಶ್ರೀಕೃಷಾನುಗ್ರಹ ಪ್ರಶಸ್ತಿ ನೀಡಿ ಪುರಸ್ಕರಿಸಿದ್ದರು. ನೇಪಾಳ, ಗುಜರಾತ್ ನ ದ್ವಾರಕಾ, ದ.ಕ, ಉಡುಪಿ, ಬೆಂಗಳೂರು, ಕೋಲಾರ,ಕುಂಭಾಶಿ ಅಯ್ಯಪ್ಪ ಸ್ವಾಮಿ ದೇವಾಲಯ, ಸಹಿತ  ಹಲವೆಡೆ ದೇವಸ್ಥಾನ ಮತ್ತು ಮಠಗಳ ಮರು ನಿರ್ಮಾಣದ ಕಾಮಗಾರಿಗೆ ನಕ್ಷೆ ಗಳನ್ನು ತಯಾರಿಸಿ ಕಟ್ಟಡಗಳ ನಿರ್ಮಾಣಕ್ಕೆ  ರೂಪು ರೇಷೆಗಳನ್ನು ತಯಾರಿಸಿಕೊಡುತ್ತಿದ್ದರು. 

ಮೃತರು ಪತ್ನಿ,ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು