ಇತ್ತೀಚಿನ ಸುದ್ದಿ
ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಯಡಿಯೂರಪ್ಪಗೆ ಸ್ಥಾನ: ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಂತಸ
17/08/2022, 23:20
ಬೆಂಗಳೂರು(reporterkarnataka.com): ಬಿಜೆಪಿ ಕೇಂದ್ರ ಸಂಸದೀಯ ಮಂಡಳಿಯಲ್ಲಿ ರಾಜ್ಯದ ಇಬ್ಬರು ಪ್ರಮುಖ ನಾಯಕರು ನೇಮಕಗೊಂಡಿರುವುದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಂತಸ ವ್ಯಕ್ತಪಡಿಸಿದ್ದಾರೆ.
ಬಿಜೆಪಿಯ ಉನ್ನತ ನಾಯಕತ್ವ ಕೈಗೊಂಡಿರುವ ನಿರ್ಧಾರವನ್ನು ನಳಿನ್ ಸ್ವಾಗತಿಸಿದ್ದಾರೆ.
ರಾಜ್ಯ ಪಕ್ಷದ ಹಿರಿಯರು, ಮಾರ್ಗದರ್ಶಕರು ಹಾಗೂ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಸಂಸದೀಯ ಮಂಡಳಿಗೆ ಸೇರಿಸಿಕೊಂಡಿರುವುದು ಮಹತ್ವದ ನಡೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಪಕ್ಷವನ್ನು ಸಂಘಟಿಸುವ ಮತ್ತು ದೇಶದಾದ್ಯಂತ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ಉದ್ದೇಶದಿಂದ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಅವರಿಗೆ ವೈಯಕ್ತಿಕವಾಗಿ ಹಾಗೂ ಪಕ್ಷದ ರಾಜ್ಯ ಘಟಕದ ಪರವಾಗಿ ಕೃತಜ್ಞತೆ ಸಲ್ಲಿಸುವುದಾಗಿ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.