ಇತ್ತೀಚಿನ ಸುದ್ದಿ
ದೆಹಲಿ: ಕುಡಿತದ ಮತ್ತಿನಲ್ಲಿ ವಿದ್ಯಾರ್ಥಿನಿಯನ್ನು ಎಳೆದಾಡಿ ಲೈಂಗಿಕ ಕಿರುಕುಳ ನೀಡಿದ ಸೆಕ್ಯೂರಿಟಿ ಗಾರ್ಡ್; ದೃಶ್ಯ ಸಿಸಿಯಲ್ಲಿ ಸೆರೆ
17/08/2022, 23:39
ಹೊಸದಿಲ್ಲಿ(reporterkarnataka.com): ದಿಲ್ಲಿಯ ಕರೋಲ್ ಭಾಗ್ ಪ್ರದೇಶದ ಖಾಸಗಿ ಹಾಸ್ಟೆಲ್‌ನ ಭದ್ರತೆಗೆ ನಿಯೋಜಿಸಿದ್ದ ಸೆಕ್ಯೂರಿಟಿ ಗಾರ್ಡ್ ಓರ್ವ ಕುಡಿದ ಮತ್ತಿನಲ್ಲಿ ವಿದ್ಯಾರ್ಥಿನಿಯರನ್ನು ಎಳೆದಾಡಿ ಲೈಂಗಿಕ ಕಿರುಕುಳ ನೀಡಿದ್ದಲ್ಲದೇ ಹಲ್ಲೆ ಮಾಡಿದ ಆಘಾತಕಾರಿ ಘಟನೆ ನಡೆದಿದೆ, ಇದರ ವಿಡಿಯೋ ಅಲ್ಲಿನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಘಟನೆಗೆ ಸಂಬಂಧಿಸಿದಂತೆ ದೆಹಲಿ ಮಹಿಳಾ ಆಯೋಗ ತಕ್ಷಣವೇ ಕ್ರಮ ಕೈಗೊಳ್ಳುವಂತೆ ಆದೇಶಿಸಿದೆ.
ವಿಡಿಯೋದಲ್ಲಿ ಕಾಣಿಸುವಂತೆ ಕಾಲೇಜು ವಿದ್ಯಾರ್ಥಿನಿಯರು ಹಾಸ್ಟೆಲ್‌ನ ಕಾರಿಡಾರ್‌ನಲ್ಲಿ ಸೇರಿದ್ದು, ಈ ವೇಳೆ ಕುಡಿದ ಮತ್ತಿನಲ್ಲಿದ ಸೆಕ್ಯೂರಿಟಿ ಗಾರ್ಡ್ ಯುವತಿಯರನ್ನು ಎಳೆದಾಡಿ ಅವರನ್ನು ತಬ್ಬಿಕೊಳ್ಳಲು ಯತ್ನಿಸಿದ್ದಾನೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ ಆಗಿದ್ದು, ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದೆಹಲಿಯ ಕರೋಲ್ ಭಾಗ್ ಪ್ರದೇಶದ ಗೋಲ್ಡ್ ವಿಲ್ಲಾ ಪಿಜಿಯಲ್ಲಿ ಈ ಘಟನೆ ನಡೆದಿದೆ.
ಘಟನೆಗೆ ಸಂಬಂಧಿಸಿದಂತೆ ಕರೋಲ್ ಭಾಗ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ. ಆದರೆ ದೂರುದಾರರು ಹೇಳಿಕೆ ನೀಡಲು ನಿರಾಕರಿಸಿದ್ದಾರೆ ಎಂದು ತಿಳಿದು ಬಂದಿದೆ. ಆದರೆ ಪೊಲೀಸರು ಸಿಸಿಟಿವಿ ದೃಶ್ಯಾವಳಿಯನ್ನು ಆಧರಿಸಿ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದಾರೆ.