2:52 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಆ.23ರಿಂದ ರಾಜ್ಯದಲ್ಲಿ ವ್ಯಾಪಕ ಮಳೆ ಸಾಧ್ಯತೆ : ಹವಾಮಾನ ಇಲಾಖೆಯಿಂದ ಮುನ್ಸೂಚನೆ

18/08/2022, 10:15

ಬೆಂಗಳೂರು(reporterkarnataka.com): ರಾಜ್ಯದಲ್ಲಿ ಕೆಲವು ದಿನಗಳಿಂದ ತಗ್ಗಿದ್ದ ಮಳೆಯ ಆರ್ಭಟ ಆ.23ರಿಂದ ಮತ್ತೆ ಚುರುಕಾಗಲಿದೆ. ಕರಾವಳಿ ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಮಲೆನಾಡು ಹಾಗೂ ರಾಜ್ಯದ ಒಳನಾಡಿನಲ್ಲಿ ಆಗಸ್ಟ್ ಮೊದಲ ವಾರದಲ್ಲಿ ಎಡೆಬಿಡದೆ ಮಳೆ ಸುರಿದು ಜನಜೀವನ ಅಸ್ತವ್ಯಸ್ಥಗೊಂಡಿತ್ತು. ಹಲವೆಡೆ ಭೂಕುಸಿತ, ಸಂಚಾರ ಕಡಿತ, ಮನೆ ಕುಸಿತ, ಜೀವಹಾನಿ, ಬೆಳೆ ನಷ್ಟ ಸಂಭವಿಸಿತ್ತು.

ನದಿ ಪಾತ್ರದಲ್ಲಿ ಪ್ರವಾಹ ಪರಿಸ್ಥಿತಿಯು ಉಂಟಾಗಿ ಜನರು ತತ್ತರಿಸುವಂತಾಗಿತ್ತು. ಆ.12ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದ್ದು, ಮಲೆನಾಡು, ಕರಾವಳಿ ಸೇರಿ ರಾಜ್ಯದ ಒಳನಾಡಿನಲ್ಲೂ ಮಳೆ ಸದ್ಯಕ್ಕೆ ಬಿಡುವು ಕೊಟ್ಟಿದೆ.

ಆ.23ರಿಂದ ರಾಜ್ಯದಲ್ಲಿ ಒಂದು ವಾರ ಕಾಲ ಉತ್ತಮ ಮಳೆಯಾಗುವ ಲಕ್ಷಣಗಳು ಕಂಡುಬರುತ್ತಿವೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸಂಸ್ಥಾಪಕ ಹಾಗೂ ನಿವೃತ್ತ ವಿಶೇಷ ನಿರ್ದೇಶಕ ವಿ.ಎಸ್.ಪ್ರಕಾಶ್ ತಿಳಿಸಿದ್ದಾರೆ. ಕಳೆದ ಒಂದು ವಾರದಿಂದ ಬಿಡುವು ನೀಡಿರುವ ಮಳೆ ಇನ್ನು ಒಂದು ವಾರ ಮುಂದುವರೆಯಲಿದ್ದು, ಒಣ ಹವೆ ಇರಲಿದೆ. ಮತ್ತೆ ಮಳೆ ಬರುವುದರಿಂದ ಕೃಷಿಗೆ ಅನುಕೂಲಕರವಾಗಲಿದೆ ಎಂದು ಅವರು ತಿಳಿಸಿದರು.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ, 2022ರ ಜೂನ್‍ನಿಂದ ಈವರೆಗೆ ರಾಜ್ಯದಲ್ಲಿ ವಾಡಿಕೆಗಿಂತ ಶೇ.23ರಷ್ಟು ಅಧಿಕ ಮಳೆಯಾಗಿದೆ. ಈ ಅವಧಿಯಲ್ಲಿ 594 ಮಿ.ಮೀ ವಾಡಿಕೆ ಮಳೆಯಾಗಿದ್ದು, 731 ಮಿ.ಮೀನಷ್ಟು ಮಳೆಯಾಗಿದೆ. ದಕ್ಷಿಣ ಒಳನಾಡಿನಲ್ಲಿ ಶೇ.120, ಉತ್ತರ ಒಳನಾಡಿನಲ್ಲಿ ಶೇ.33, ಮಲೆನಾಡಿನಲ್ಲಿ ಶೇ.16ರಷ್ಟು ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಆದರೆ ಕರಾವಳಿ ಭಾಗದಲ್ಲಿ ಮಾತ್ರ ವಾಡಿಕೆ ಪ್ರಮಾಣದ ಮಳೆಯಾಗಿದೆ.

ಆ.1ರಿಂದ ಇಲ್ಲಿಯವರೆಗೆ ರಾಜ್ಯದಲ್ಲಿ 192 ಮಿ.ಮೀನಷ್ಟು ಮಳೆಯಾಗಿದ್ದು, ವಾಡಿಕೆಗಿಂತ ಶೇ.55ರಷ್ಟು ಅಧಿಕ ಮಳೆಯಾಗಿದೆ. ಈ ಅವಧಿಯಲ್ಲಿ ರಾಜ್ಯದ ವಾಡಿಕೆ ಮಳೆ ಪ್ರಮಾಣ 124 ಮಿ.ಮೀ. ದಕ್ಷಿಣ ಒಳನಾಡಿನಲ್ಲಿ 39 ಮಿ.ಮೀ ವಾಡಿಕೆ ಮಳೆಯಾಗಿದ್ದು, 137 ಮಿ.ಮೀ ಮಳೆಯಾಗುವ ಮೂಲಕ ವಾಡಿಕೆಗಿಂತ ಶೇ.253ರಷ್ಟು ಅತ್ಯಧಿಕ ಮಳೆಯಾಗಿದೆ.

ಅದೇ ರೀತಿ ಉತ್ತರ ಒಳನಾಡಿನಲ್ಲಿ ವಾಡಿಕೆಯ 62 ಮಿ.ಮೀಗೆ 96 ಮಿ.ಮೀನಷ್ಟು ಮಳೆಯಾಗಿದ್ದು, ಶೇ.55ರಷ್ಟು ಹೆಚ್ಚು ಮಳೆಯಾಗಿದೆ. ಮಲೆನಾಡು ಭಾಗದಲ್ಲಿ 254 ಮಿ.ಮೀ ವಾಡಿಕೆ ಮಳೆಯಾಗಿದ್ದು, 405 ಮಿ.ಮೀನಷ್ಟು ಮಳೆಯಾಗಿದ್ದು, ವಾಡಿಕೆಗಿಂತ ಶೇ.59ರಷ್ಟು ಅಧಿಕ ಮಳೆಯಾಗಿದ್ದರೆ, ಕರಾವಳಿ ಭಾಗದಲ್ಲಿ 489 ಮಿ.ಮೀ ವಾಡಿಕೆ ಮಳೆಯಾಗಿದ್ದು, 517 ಮಿ.ಮೀನಷ್ಟು ಮಳೆಯಾಗಿದೆ. ವಾಡಿಕೆಗಿಂತ ಶೇ.6ರಷ್ಟು ಮಾತ್ರ ಹೆಚ್ಚು ಮಳೆಯಾದಂತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು