ಇತ್ತೀಚಿನ ಸುದ್ದಿ
ಕೊಡಗು: ಮಾಜಿ ಸಿಎಂ ಸಿದ್ದರಾಮಯ್ಯಗೆ ಕಪ್ಪು ಬಾವುಟ ಪ್ರದರ್ಶನ: ಕಾರಿನೊಳಗೆ ಸಾವರ್ಕರ್ ಫೋಟೋ ಎಸೆತ
18/08/2022, 18:00
ಕವಿತಾ ಪೊನ್ನಪ್ಪ ಭಾಗಮಂಡಲ ಮಡಿಕೇರಿ
info.reporterkarnataka@gmail.com
ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಲು ಕೊಡಗಿಗೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಲಾಯಿತು. ಪ್ರತಿಭಟನಾಕಾರರು ಗೋ ಬ್ಯಾಕ್ ಸಿದ್ದರಾಮಯ್ಯ ಎಂಬ ಘೋಷಣೆ ಕೂಗಿದರು.
ಸಿದ್ದರಾಮಯ್ಯ ಅವರು ಕೊಡಗು ಪ್ರವೇಶಿಸುತ್ತಿದ್ದಂತೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಧಿಕ್ಕಾರ ಕೂಗಿ ಪ್ರತಿಭಟಿಸಿದರು.
ಸಿದ್ದರಾಮಯ್ಯ ಅವರ ಕಾರಿಗೆ ಕಪ್ಪು ಬಾವುಟ ಪ್ರದರ್ಶಿಸಿದ ಕಾರ್ಯಕರ್ತರು, ಸಾವರ್ಕರ್ ಫೋಟೋ ಹಿಡಿದು ಘೋಷಣೆ ಕೂಗಿದರು. ಸಿದ್ದರಾಮಯ್ಯ ಅವರು ಪ್ರಯಾಣಿಸುತ್ತಿದ್ದ ಕಾರಿನ ಪಕ್ಕಕ್ಕೆ ಬಂದ ಕಾರ್ಯಕರ್ತರು ಅವರು ಕೂತಿರುವ ಜಾಗಕ್ಕೆ ಸಾವರ್ಕರ್ ಫೋಟೋ ಎಸೆದರು. ಸ್ಥಳದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಜಮಾಯಿಸಿದ್ದರು. ಮಾಜಿ ಮುಖ್ಯಮಂತ್ರಿಗಳಿಗೆ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸುವಲ್ಲಿ ಕೊಡಗು ಪೊಲೀಸ್ ವಿಫಲವಾಗಿದೆ ಎಂದು ಸಾರ್ವಜನಿಕರು ಆರೋಪಿಸಿದರು.