ಇತ್ತೀಚಿನ ಸುದ್ದಿ
ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ ಪ್ರಕರಣ: ಹಿಂದೂ ಸಂಘಟನೆಗಳ 9 ಮಂದಿ ವಿರುದ್ದ ಎಫ್ಐಆರ್
20/08/2022, 10:28
ಮಡಿಕೇರಿ(reporterkarnataka.com):
ಕಾಂಗ್ರೆಸ್ ದೂರಿನ ಹಿನ್ನಲೆ 9 ಬಿಜೆಪಿ ಹಿಂದೂಪರ ಸಂಘಟನೆ ಕಾರ್ಯಕರ್ತರ ಮೇಲೆ ಎಫ್ಐಆರ್ ದಾಖಲಿಸಲಾಗಿದೆ.
ಕಾಂಗ್ರೆಸ್ ಮುಖಂಡ ಪ್ರಕಾಶ್ ಆಚಾರ್ಯ ನೀಡಿದ್ದ ದೂರಿನ ಮೇಲೆ ಎಫ್ಐಆರ್ ದಾಖಲಿಸಲಾಗಿದೆ.
ಕವನ್ ಕಾರ್ಯಪ್ಪ, ಉಮೇಶ್ ಸುಬ್ರಮಣಿ, ಸತ್ಯ ಕರ್ಕೆರ, ಮಹೇಶ್ ಜೈನಿ, ನವೀನ್ ಪೂಜಾರಿ.
ಅರುಣ್ ಶೆಟ್ಟಿ, ಸಬಿತಾ, ಶ್ವೇತಾ, ಭರತ್, ಮತ್ತಿತರರ ಮೇಲೆ ಎಫ್ಐಆರ್. ಸದ್ಯ ಎಲ್ಲರೂ ಮಡಿಕೇರಿ ನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ.
ಮಡಿಕೇರಿ ನಗರ ಪೊಲೀಸ್ ಠಾಣೆಗೆ ಹೆಚ್ಚುವರಿ ಪೊಲೀಸ್ ಪಡೆಗಳ ಆಗಮನ.
ಠಾಣೆಯ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್, ಕೆಎಸ್ಆರ್ಪಿ ತುಕಡಿ ನಿಯೋಜನೆ.