12:50 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಮಡಿಕೇರಿ: ಕಡವೆ ಬೇಟೆ; ಮಾಲು ಸಹಿತ ಇಬ್ಬರು ಆರೋಪಿಗಳು ವಶಕ್ಕೆ

20/08/2022, 11:05

ಮಡಿಕೇರಿ(reporterkarnataka.com):
ಗುಂಡು ಹೊಡೆದು ಕಡವೆಯನ್ನು ಹತ್ಯೆ ಮಾಡಿದ ಇಬ್ಬರು ಆರೋಪಿಗಳನ್ನು ಮಾಲು ಸಹಿತ ಮಡಿಕೇರಿ ವಲಯ ಅರಣ್ಯ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಮೂರ್ನಾಡು ಐಕೊಳ ನಿವಾಸಿಗಳಾದ ಅಬ್ದುಲ್ ಅಜೀಜ್ (48) ಮತ್ತು ಹಮೀದ್ (35) ಎಂಬುವವರೇ ಬಂದಿದ್ದ ಆರೋಪಿಗಳಾಗಿದ್ದಾರೆ.

ಮೂರ್ನಾಡು ಗ್ರಾಮದಲ್ಲಿ ಕಡವೆಯನ್ನು ಕೊಂದು ಅದನ್ನು ಮಾಂಸ ಮಾಡುತ್ತಿರುವ ಬಗ್ಗೆ ಮಡಿಕೇರಿ ವಲಯ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಶುಕ್ರವಾರ ಬೆಳಗ್ಗೆ 9 ಗಂಟೆಯ ವೇಳೆಗೆ ಖಚಿತ ಮಾಹಿತಿ ಲಭಿಸಿತ್ತು.

ಈ ಮಾಹಿತಿಯನ್ನು ಆಧರಿಸಿ ದಾಳಿ ನಡೆಸಿದ ಅರಣ್ಯ ಇಲಾಖೆ ಸಿಬ್ಬಂದಿಗಳು ಐಕೊಳ ಗ್ರಾಮದ ಕಾಫಿ ತೋಟದ ಒಳಗೆ ಕಡವೆ ಮಾಂಸ ಮಾಡುತ್ತಿರುವವರನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.

ಈ ಸಂದರ್ಭ ಸ್ಥಳದಲ್ಲಿ 120 ಕೆಜಿ ಕಡವೆ ಮಾಂಸ ಕೃತ್ಯಕ್ಕೆ ಬಳಸಿದ ಬಂದೂಕು, ಕತ್ತಿಗಳು,ಚಾಕು, ಪ್ಲಾಸ್ಟಿಕ್ ಹೊದಿಕೆ ಮಾಂಸ ತುಂಬಲು ಬಳಸಿದ್ದ ಬಕೆಟ್ಟನ್ನು ವಶಕ್ಕೆ ಪಡೆಯಲಾಗಿದೆ.

ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಮಡಿಕೇರಿ ವಲಯ ವನ್ಯ ಜೀವಿ ಸಂರಕ್ಷಣಾಧಿಕಾರಿ ಮಧುಸೂದನ್ ಮಾಹಿತಿ ನೀಡಿದ್ದಾರೆ.

ಪ್ರಕರಣದಲ್ಲಿ ಇನ್ನೂ ಕೆಲವು ವ್ಯಕ್ತಿಗಳು ಶಾಮೀಲಾಗಿರುವ ಶಂಕೆ ಇದ್ದು ತನಿಖೆ ಮುಂದುವರೆದಿದೆ.

ಬಂಧಿತ ಆರೋಪಿಗಳನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗುತ್ತದೆ ಎಂದು ಹೇಳಿದ್ದಾರೆ. ಮಡಿಕೇರಿ ವ್ಯಾಪ್ತಿಯಲ್ಲಿ ವನ್ಯಜೀವಿ ಹತ್ಯೆ ಪ್ರಕರಣಗಳು ನಡೆಯುತ್ತಿರುವ ಬಗ್ಗೆ ಮಾಹಿತಿ ಇದೆ. ವನ್ಯಜೀವಿ ಸಂರಕ್ಷಣೆಯ ಹಿನ್ನೆಲೆಯಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳುವ ಮೂಲಕ ಕೃತ್ಯಗಳನ್ನು ಮಟ್ಟ ಹಾಕಲಾಗುತ್ತದೆ ಎಂದು ಅರಣ್ಯ ಅಧಿಕಾರಿ ಮಧುಸೂದನ್ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು