5:27 PM Saturday10 - October 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:…

ಇತ್ತೀಚಿನ ಸುದ್ದಿ

ಯಡ್ತರೆ: ನ್ಯಾನೋ‌ ಕಾರಿನಲ್ಲಿ ಅಕ್ರಮ ಗೋಮಾಂಸ ಸಾಗಾಟ; ಪೊಲೀಸರ ದಾಳಿ, ಓರ್ವನ ಬಂಧನ, ಇನ್ನೋರ್ವ ಪರಾರಿ

21/08/2022, 17:42

ಬೈಂದೂರು(reporterkarnataka.com): ಕುಂದಾಪುರದಿಂದ ಭಟ್ಕಳಕ್ಕೆ ಗೋ ಮಾಂಸ ಸಾಗಾಟ ಮಾಡುತ್ತಿದ್ದ ನ್ಯಾನೋ‌ ಕಾರನ್ನು ತಡೆದು ನಿಲ್ಲಿಸಿದ ಬೈಂದೂರು ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದು, ಇನ್ನೋರ್ವ ಕಾರಿನಿಂದ ಇಳಿದು ಪರಾರಿಯಾಗಿರುವ ಘಟನೆ ಬೈಂದೂರು ತಾಲೂಕಿನ ಯಡ್ತರೆ ಗ್ರಾಮದ ಹೊಸ ಬಸ್ ನಿಲ್ದಾಣದ ಬಳಿ ನಡೆದಿದೆ.

ಭಟ್ಕಳ ನಿವಾಸಿ ಮಹಮ್ಮದ್ ಗೌಸ್ ಗವಾಯಿ(37)ಬಂಧಿತ ಆರೋಪಿ. ಪರಾರಿಯಾದ ಆರೋಪಿಯನ್ನು ನಜ್ಮುಲ್ ಎಂದು ತಿಳಿದು ಬಂದಿದೆ. ಕಾರನ್ನು ಪರಿಶೀಲನೆ ನಡೆಸಿದಾಗ ಹಿಂಬದಿಯಲ್ಲಿ ನೀಲಿ ಬಣ್ಣದ ಪಾಲಿಥೀನ್ ಶೀಟ್ ನಲ್ಲಿ ಗೋ ಮಾಂಸ ಇರುವುದು ಕಂಡು ಬಂದಿದೆ. 22 ಸಾವಿರ ಮೌಲ್ಯದ 150 ಕೆಜಿ ಗೋಮಾಂಸ ಪತ್ತೆಯಾಗಿದೆ. ಆರೋಪಿಗಳು ಇದನ್ನು ಭಟ್ಕಳದಲ್ಲಿ ಮದುವೆ ಕಾರ್ಯಕ್ರಮವೊಂದಕ್ಕೆ ತೆಗೆದುಕೊಂಡು ಹೋಗುತ್ತಿದ್ದರು ಎಂದು ವಿಚಾರಣೆ ವೇಳೆ ಬಾಯಿ ಬಿಟ್ಟಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

ಇತ್ತೀಚಿನ ಸುದ್ದಿ

ಜಾಹೀರಾತು