ಇತ್ತೀಚಿನ ಸುದ್ದಿ
ಚಿಕ್ಕಮಗಳೂರು: ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಹಸುವಿನ ಮೇಲೆ ಹುಲಿ ದಾಳಿ; ಸಾವು
22/08/2022, 00:36
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಜಿಲ್ಲೆಯ ಮಲೆನಾಡು ಭಾಗ ಮೂಡಿಗೆರೆ ತಾಲ್ಲೂಕಿನ ಕೆಲವು ಗ್ರಾಮಗಳಲ್ಲಿ ನಿರಂತರ ಹುಲಿ ದಾಳಿ ಮುಂದುವರಿದಿದ್ದು, ಎಸ್ಟೇಟ್ ನ ಹಟ್ಟಿಯಲ್ಲಿ ಕಟ್ಟಿ ಹಾಕಿದ್ದ ಹಸುವೊಂದನ್ನು ಹುಲಿ ಕೊಂದು ಹಾಕಿರುವ ಘಟನೆ ನಡೆದಿದೆ.
ಮೂಡಿಗೆರೆ ತಾಲ್ಲೂಕಿನ ಮತ್ತಿಕಟ್ಟೆ ಗ್ರಾಮದಲ್ಲಿರುವ ಎಸ್ಟೇಟ್ ನ ಹಟ್ಟಿಯಲ್ಲಿ ಕಟ್ಟಿ ಹಾಕಿದ್ದ ಹಸುವಿನ ಮೇಲೆ ಹುಲಿ ದಾಳಿ ನಡೆಸಿ ಕೊಂದು ಹಾಕಿದೆ.
ಸಂತೋಷ್ ಎಂಬುವರಿಗೆ ಸೇರಿದ್ದ ಹಸು ಇದಾಗಿದೆ.
ಉಪವಲಯ ಅರಣ್ಯ ಅಧಿಕಾರಿ ಉಮೇಶ್, ಅರಣ್ಯ ರಕ್ಷಕ ಮೋಹಸೀನ್ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
ನರಭಕ್ಷಕ ಹುಲಿ ಅಲ್ಲಲ್ಲಿ ಹಸುಗಳ ಮೇಲೆ ನಿರಂತರ ದಾಳಿ ಮಾಡುತ್ತಿದ್ದು , ಸ್ಥಳೀಯರಲ್ಲಿ ಆತಂಕ ಮನೆ ಮಾಡಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಕೂಡಲೇ ಹುಲಿಯನ್ನು ಹಿಡಿಯಬೇಕು ಎಂದು ರೈತರು ಮತ್ತು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ತಾಲ್ಲೂಕಿನಲ್ಲಿರುವ ಅರಣ್ಯ ಕಚೇರಿಗೆ ಬೀಗ ಹಾಕಿ ಪ್ರತಿಭಟನೆ ಮಾಡುತ್ತೇವೆ ಎಂದು ಗ್ರಾಮಸ್ಥರು ಖಡಕ್ ಎಚ್ಚರಿಕೆ ನೀಡಿದ್ದಾರೆ.