4:29 AM Friday8 - May 2026
ಬ್ರೇಕಿಂಗ್ ನ್ಯೂಸ್
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

ಇತ್ತೀಚಿನ ಸುದ್ದಿ

ಉರ್ವಸ್ಟೋರ್: ವಾಲಿಬಾಲ್ ಕ್ರೀಡಾಂಗಣ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಭೂಮಿಪೂಜೆ

23/08/2022, 11:25

ಮಂಗಳೂರು(Reporterkarnataka.com): ಉರ್ವಸ್ಟೋರ್ ಮಂಗಳ ಫ್ರೆಂಡ್ಸ್ ಸರ್ಕಲ್ ಬಳಿ ವಾಲಿಬಾಲ್ ಕ್ರೀಡಾಂಗಣ ಅಭಿವೃದ್ಧಿ ಕಾಮಗಾರಿಗೆ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. 

ಬಳಿಕ ಮಾತನಾಡಿದ ಶಾಸಕ ಕಾಮತ್, ನಗರದ ಅನೇಕ ಕ್ರೀಡಾಪಟುಗಳು ರಾಜ್ಯ, ರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ಕಬಡ್ಡಿ, ವಾಲಿಬಾಲ್, ಕ್ರಿಕೇಟ್ ಮುಂತಾದ ಕ್ರೀಡೆಗಳಲ್ಲಿ ಪಾಲ್ಗೊಳ್ಳುವ ಕ್ರೀಡಾಪಟುಗಳಿಗೆ ಸೂಕ್ತ ವ್ಯವಸ್ಥೆಯ ಕುರಿತು ಸರಕಾರದಿಂದ ಸವಲತ್ತುಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು. 

ಮಂಗಳ ಫ್ರೆಂಡ್ಸ್ ಸರ್ಕಲ್ ಮೂಲಕ ಅನೇಕ ಕ್ರೀಡಾಪಟುಗಳು ಇಂದಿಗೂ ರಾಜ್ಯವನ್ನು ಪ್ರತಿನಿಧಿಸುತಿದ್ದಾರೆ. ಆ ನಿಟ್ಟಿನಲ್ಲಿ  ಕ್ರೀಡಾಂಗಣ ಅಭಿವೃದ್ಧಿಗೆ 40 ಲಕ್ಷ ರೂಪಾಯಿ ಅನುದಾನ ಬಿಡುಗಡೆಗೊಳಿಸಿದ್ದು, ಸ್ಥಳೀಯ ಪ್ರತಿಭೆಗಳು ನಾಡಿಗೆ ಕೀರ್ತಿ ತರುವ ನಿಟ್ಟಿನಲ್ಲಿ ಉಪಯೋಗವಾಗಲಿ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮೇಯರ್ ಪ್ರೇಮಾನಂದ ಶೆಟ್ಟಿ, ಸ್ಥಳೀಯ ಕಾರ್ಪೋರೇಟರ್ ಗಣೇಶ್ ಕುಲಾಲ್, ಪಾಲಿಕೆ ಮುಖ್ಯ ಸಚೇತಕರಾದ ಸುಧೀರ್ ಶೆಟ್ಟಿ ಕಣ್ಣೂರು, ಪಾಲಿಕೆ ಸದಸ್ಯರಾದ ಜಯಲಕ್ಷ್ಮಿ ಶೆಟ್ಟಿ, ಸಂಧ್ಯಾ ಮೋಹನ್ ಆಚಾರ್, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ರಾಧಾಕೃಷ್ಣ, ಮಾಜಿ ಮೇಯರ್ ಪ್ರವೀಣ್ ಅಂಚನ್, ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಉಪನಿರ್ದೇಶಕ ರವಿ ನಾಯ್ಕ್, ಮಾಜಿ ರಾಜ್ಯ ವಾಲಿಬಾಲ್ ಕ್ರೀಡಾಪಟು ಸುನಿಲ್ ಬಾಳಿಗ,  ಉದ್ಯಮಿಗಳಾದ ಜಯ ಪ್ರಕಾಶ್ ರಾವ್, ರಮೇಶ್ ಶೆಟ್ಟಿ, ರವಿ, ರಾಜೇಂದ್ರ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು