8:24 AM Tuesday23 - September 2025
ಬ್ರೇಕಿಂಗ್ ನ್ಯೂಸ್
ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್…

ಇತ್ತೀಚಿನ ಸುದ್ದಿ

ಈಶ್ವರಪ್ಪಗೆ ಮತ್ತೆ ಸಂಕಷ್ಟ?: ಸಂತೋಷ್ ಸಾವಿನ ಪ್ರಕರಣದ ಬಿ ರಿಪೋರ್ಟ್ ಪ್ರಶ್ನಿಸಿ ಕೋರ್ಟ್ ಗೆ ತಕರಾರು ಅರ್ಜಿ

24/08/2022, 00:08

ಬೆಂಗಳೂರು(reporterkarnataka.com): ಬೆಳಗಾವಿ ಜಿಲ್ಲೆಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಅನುಮಾನಾಸ್ಪದ ಸಾವಿನ ಪ್ರಕರಣದಲ್ಲಿ ಮಾಜಿ ಸಚಿವ ಈಶ್ವರಪ್ಪ ವಿರುದ್ಧ ಬಿ ರಿಪೋರ್ಟ್ ಸಲ್ಲಿಸಿರುವುದನ್ನು ಪ್ರಶ್ನಿಸಿ ಸಂತೋಷ್ ಕುಟುಂಬಸ್ಥರು ಜನಪ್ರತಿನಿಧಿಗಳ ವಿಶೇಷ ಕೋರ್ಟ್‍ಗೆ ತಕರಾರು ಅರ್ಜಿ ಸಲ್ಲಿಸಿದ್ದಾರೆ.

ಉಡುಪಿ ಪೊಲೀಸರು ನಡೆಸಿದ ತನಿಖೆ ನ್ಯಾಯಯುತವಾಗಿಲ್ಲ. ಪೂರ್ವಗ್ರಹ ಪೀಡಿತರಾಗಿ ತನಿಖೆ ನಡೆಸಿದ್ದಾರೆ. ಪಾರದರ್ಶಕ ತನಿಖೆಗಾಗಿ ಸಿಬಿಐಗೆ ಪ್ರಕರಣವನ್ನು ಒಪ್ಪಿಸಬೇಕೆಂದು ಕೋರಿ ನ್ಯಾಯಾಲಯಕ್ಕೆ ಮೃತ ಸಂತೋಷ್ ಸಹೋದರ ಪ್ರಶಾಂತ್ ಅವರು ತಕರಾರು ಅರ್ಜಿ ಸಲ್ಲಿಸಿದ್ದಾರೆ.

ಏನು ಪ್ರಕರಣ?: ಬೆಳಗಾವಿಯ ಹಿಂಡಲಗಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದ 4 ಕೋಟಿ ವೆಚ್ಚದ ಕಾಮಗಾರಿ ಬಿಲ್ ಮಂಜೂರು ಮಾಡಲು ಈಶ್ವರಪ್ಪ 40 ಪರ್ಸೆಂಟ್ ಕಮಿಷನ್‍ಗೆ ಒತ್ತಾಯಿಸಿದ್ದರು ಎಂದು ಆರೋಪಿಸಿ ಎ.11ರಂದು 

ಸಂತೋಷ್ ಪಾಟೀಲ್ ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಮೃತ ಸಂತೋಷ್ ಪಾಟೀಲ ಸಂಬಂಧಿಗಳು ನೀಡಿದ ದೂರಿನಂತೆ ಸೆಕ್ಷನ್ 306, 334 ಅಡಿ ಈಶ್ವರಪ್ಪ (ಎ 1), ಬಸವರಾಜ್ (ಎ 2), ರಮೇಶ್ (ಎ 3) ವಿರುದ್ಧ ಉಡುಪಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರಶಾಂತ್ ಅವರು, ಸಂತೋಷ್ ಪಾಟೀಲ್ ಆತ್ಮಹತ್ಯೆ ಹಿಂದೆ ಹಲವರ ಕೈವಾಡವಿದೆ. ಉಡುಪಿ ಪೊಲೀಸರು ಸರಿಯಾದ ಮಾರ್ಗದಲ್ಲಿ ತನಿಖೆ ನಡೆಸದೆ ಹಾದಿ ತಪ್ಪಿಸಿದ್ದಾರೆ. ತನಿಖೆ ವೇಳೆ ಹಲವು ರೀತಿಯ ಪ್ರಭಾವ ಬೀರಲಾಗಿದೆ. ಹೀಗಾಗಿ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ಪ್ರಶ್ನಿಸಿ ಕಾನೂನು ಹೋರಾಟ ನಡೆಸಲಾಗುತ್ತಿದೆ ಎಂದು ಮೃತ ಸಂತೋಷ್ ಸಹೋದರ ಪ್ರಶಾಂತ್ ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು