ಇತ್ತೀಚಿನ ಸುದ್ದಿ
ಮೂಡಿಗೆರೆ: ಕಾಡಿನಿಂದ ನಾಡಿಗೆ ಬಂದ ಜಿಂಕೆ ಸಾವು; ನಾಯಿಗೆ ಬೆದರಿ ಹೃದಯಾಘಾತದ ಶಂಕೆ
24/08/2022, 19:38
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಕಾಡಿನಿಂದ ನಾಡಿಗೆ ಬಂದ ಜಿಂಕೆ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದಲ್ಲಿ ನಡೆದಿದೆ.


ಸ್ಥಳೀಯರಾದ ರವೀಂದ್ರ ಅವರು ನೀರು ಕುಡಿಸಿ ಜಿಂಕೆಯನ್ನು ಬದುಕಿಸಲು ಪ್ರಯತ್ನ ಪಟ್ಟರೂ ಫಲಕಾರಿಯಾಗಲಿಲ್ಲ.ನಾಯಿಗಳು ಬೆದರಿಸಿದ ಹಿನ್ನೆಲೆ ಹೃದಯಾಘಾತದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಅರಣ್ಯ ರಕ್ಷಕ ಅಭಿಜಿತ್ ಮತ್ತು ಅಧಿಕಾರಿಗಳು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.














