5:24 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಅಪಘಾತದಲ್ಲಿ ಕೈ ಕಳೆದುಕೊಂಡ ಬಾಳೆಪುಣಿ ಗ್ರಾಪಂ ಸದಸ್ಯೆಗೆ ಎಚ್ ಎಂಎಸ್ ನಿಂದ ಚಿಕಿತ್ಸೆಗೆ ನೆರವು

25/08/2022, 18:33

ಮಂಗಳೂರು(reporterkarnataka.com): ಇತ್ತೀಚೆಗೆ ವಾಹನಾಪಘಾತಕ್ಕೀಡಾಗಿ ತನ್ನ ಎಡ ಕೈಯನ್ನು ಕಳೆದುಕೊಂಡು ನಗರದ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಳೆಪುಣಿ ಗ್ರಾಮ ಪಂಚಾಯತ್ ಸದಸ್ಯೆ ಹಾಗೂ ಗಣೇಶ್ ಬೀಡಿ ಕಾರ್ಮಿಕೆಯಾಗಿರುವ ಸೆಮೀಮ ಅವರಿಗೆ ಎಚ್.ಎಂ.ಎಸ್ ಯೂನಿಯನ್ ವತಿಯಿಂದ 30 ಸಾವಿರ ಆರ್ಥಿಕ ನೆರವು ನೀಡಲಾಯಿತು.

ಮಂಗಳೂರಿನ ಚಿತ್ತಾರ ಬಳಗದ ಮನವಿಗೆ ಸ್ಪಂದಿಸಿದ ಕರ್ನಾಟಕ ಕರಾವಳಿ ಬೀಡಿ ವರ್ಕರ್ಸ್ ಮತ್ತು  ಸೌತ್ ಕೆನರಾ ಮತ್ತು ಉಡುಪಿ ಬೀಡಿ ಕಂಟ್ರಾಕ್ಟರ್ಸ್ ಯೂನಿಯನ್ ಪದಾಧಿಕಾರಿಗಳು ಆಸ್ಪತ್ರೆಗೆ ಬಂದು ಸೆಮೀಮ ಅವರಿಗೆ ನೆರವಿನ ಮೊತ್ತದ ಚೆಕ್ ಹಸ್ತಾಂತರಿಸಿದರು. 

ಯೂನಿಯನ್ ರಾಜ್ಯ ಘಟಕದ ಅಧ್ಯಕ್ಷ ಎಂ.ಸುರೇಶ್ಚಂದ್ರ ಶೆಟ್ಟಿ, ಜಿಲ್ಲಾಧ್ಯಕ್ಷ ಮಹಮ್ಮದ್ ರಫಿ, ಕಂಟ್ರಾಕ್ಟರ್ಸ್ ಯೂನಿಯನ್ ಅಧ್ಯಕ್ಷ ಹರೀಶ್ ಕೆ.ಎಸ್. ಕೋಶಾಧಿಕಾರಿ ಇಸ್ಮಾಯಿಲ್ ಡಿ.ಎಸ್. , ಸದಸ್ಯ ಸಿದ್ದಿಕ್ ಅರ್ಕಾನ,  ಹಾಗೂ ಮುಡಿಪು ಜನಶಿಕ್ಷಣ ಟ್ರಸ್ಟ್ ನ ನಿರ್ದೇಶಕರಾದ ಶೀನ ಶೆಟ್ಟಿ ಮತ್ತು ಕ್ರಷ್ಣಮೂಲ್ಯ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು