1:53 PM Wednesday7 - October 2026
ಬ್ರೇಕಿಂಗ್ ನ್ಯೂಸ್
ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್

ಇತ್ತೀಚಿನ ಸುದ್ದಿ

ಮೋಹಿನಿಯ ಮೋಹಜಾಲಕ್ಕೆ ಬಿದ್ದ ಒಂಟಿ ಸಲಗ: ಅರಣ್ಯ ಇಲಾಖೆಯ ಹನಿಟ್ರ್ಯಾಪ್ ಕೊನೆಗೂ ಯಶಸ್ವಿ

25/08/2022, 21:29

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಳೆದ ನಾಲ್ಕೈದು ತಿಂಗಳಿನಿಂದ ಮಲೆನಾಡಿಗರ ನಿದ್ದೆಗೆಡಿಸಿದ್ದ ಹಾವೇರಿಯ ಕಾಡಾನೆ ಕೊನೆಗೂ ಹನಿಟ್ರ್ಯಾಪ್ ಗೆ ಸಿಲುಕಿದೆ. ಮೋಹಿನಿಯ ಮೋಹಜಾಲಕ್ಕೆ ಸಿಲುಕಿದ ಟಸ್ಕರನ್ನು ಅರಣ್ಯ ಸಿಬ್ಬಂದಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕೊಪ್ಪ ತಾಲೂಕಿನ ಜಯಪುರ ಸಮೀಪದ ಎಲೆಮಡಿಲು ಗ್ರಾಮದಲ್ಲಿ ಹನಿಟ್ರ್ಯಾಪ್ ಮೂಲಕ ಹಾವೇರಿ ಟಸ್ಕರ್ ನ ಹಿಡಿಯುವಲ್ಲಿ ಅರಣ್ಯಾಧಿಕಾರಿಗಳು ಸಫಲರಾಗಿದ್ದಾರೆ. ಮೋಹಿನಿ ಎಂಬ ಹೆಣ್ಣಾನೆಯನ್ನು ಬಿಟ್ಟು ಈ ಒಂಟಿ ಸಲಗವನ್ನು ಸೆರೆ ಹಿಡಿಯಲಾಯಿತು.ನಾಲ್ಕೈದು ತಿಂಗಳಿಂದ ಈ ಆನೆ ಮಲೆನಾಡಿಗರ ನಿದ್ದೆಗೆಡಿಸಿತ್ತು.


ಐದು ಸಾಕಾನೆಯಿಂದ ಒಂದು ಒಂಟಿ ಸಲಗಕ್ಕಾಗಿ ಕಾರ್ಯಚರಣೆ ನಡೆಸಲಾಗಿತ್ತು. 40ಕ್ಕೂ ಹೆಚ್ಚು ಸಿಬ್ಬಂದಿ 6 ದಿನದಿಂದ  ಕಾರ್ಯಾಚರಣೆ ನಡೆಸುತ್ತಿದ್ದರು. ಈ ಒಂಟಿ ಸಲಗ ಹಗಲಲ್ಲಿ ದಾಂಧಲೆ ನಡೆಸಿ ಸಂಜೆ ಪ್ರಪಾತದ ಸ್ಥಳಕ್ಕೆ ಹೋಗುತ್ತಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು