12:34 AM Wednesday16 - July 2025
ಬ್ರೇಕಿಂಗ್ ನ್ಯೂಸ್
ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ…

ಇತ್ತೀಚಿನ ಸುದ್ದಿ

ಕಾಸರಗೋಡು: ದುಷ್ಕರ್ಮಿಗಳಿಂದ ರೈಲು ಹಳಿ ತಪ್ಪಿಸಲು ಯತ್ನ; ಹಾಗಾದರೆ ವಿಧ್ವಂಸಕ ಕೃತ್ಯಕ್ಕೆ ನಡೆದಿತ್ತೇ ಸಂಚು?

26/08/2022, 12:25

ಮಂಗಳೂರು(reporterkarnataka.com): ನೆರೆಯ ಕೇರಳದ ಕಾಸರಗೋಡಿನ ಬಳಿ ರೈಲ್ವೆ ಹಳಿಗಳ ಮೇಲೆ ಕಾಂಕ್ರೀಟ್ ತುಂಡು ಇಟ್ಟು ರೈಲನ್ನು ಹಳಿಗಳನ್ನು ತಪ್ಪಿಸಲು ಕಿಡಿಗೇಡಿಗಳು ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ. ಇದರೊಂದಿಗೆ ಕರಾವಳಿಯಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು ನಡೆದಿತ್ತೇ ಎಂಬ ಅನುಮಾನ ಕಾಡಲಾರಂಭಿಸಿದೆ.

ಕಾಸರಗೋಡಿನ ಕೋಟಿಕುಳಂ ಮತ್ತು ಬೇಕಲ ಮಧ್ಯೆ ರೈಲ್ವೆ ಹಳಿಗಳ ಮೇಲೆ ಕಿಡಿಗೇಡಿಗಳು ಆಗಸ್ಟ್ 21ರಂದು ಕಬ್ಬಿಣ್ಣದ ಸರಳುಗಳು, ಕಾಂಕ್ರೀಟ್ ಇಟ್ಟು ರೈಲಿನ ಹಳಿ ತಪ್ಪಿಸಲು ಯತ್ನಿಸಿರುವ ಘಟನೆ ನಡೆದಿದೆ. ರೈಲ್ವೆ ಗಾರ್ಡ್ ಸಮಯ ಪ್ರಜ್ಞೆಯಿಂದ ಭಾರೀ ದುರಂತ ತಪ್ಪಿದೆ. ಹಳಿ ಮೇಲೆ 35 ಕೆಜಿ ಕಾಂಕ್ರೀಟ್ ತುಂಡು ಪತ್ತೆಯಾಗಿದೆ.

ರೈಲ್ವೆ ಪೊಲೀಸರು ಮತ್ತು ಸ್ಥಳೀಯ ಪೊಲೀಸರು ಘಟನೆ ಸಂಬಂಧ ತನಿಖೆ ನಡೆಸುತ್ತಿದ್ದಾರೆ. ಕಳೆದ ಶನಿವಾರವೂ ಇಂತಹುದೇ ಕೃತ್ಯ ನಡೆದಿದ್ದು, ಚಿತ್ತಾರಿ ಎಂಬಲ್ಲಿ ಕೊಯಂಬತ್ತೂರು ಮಂಗಳೂರು ರೈಲಿನ ಮೇಲೆ ಕಿಡಿಗೇಡಿಗಳು ಕಲ್ಲೆಸೆದು ಪರಾರಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು