ಇತ್ತೀಚಿನ ಸುದ್ದಿ
ಪ್ರಧಾನಿ ಮೋದಿ ಮಂಗಳೂರಿಗೆ ಆಗಮನ: ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಮಂಡಲ ಪ್ರಮುಖರ ಸಭೆ
26/08/2022, 20:08

ಮಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 2ನೇ ತಾರೀಕು ಮಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರ ನೇತೃತ್ವದಲ್ಲಿ ಮಂಡಲ ಪ್ರಮುಖರ ಸಭೆ ನಡೆಯಿತು.
ಈ ವಿಚಾರದ ಕುರಿತು ಮಾತನಾಡಿದ ಶಾಸಕ ಕಾಮತ್, ಪ್ರಧಾನಿ ಆಗಮನದ ಸಂದರ್ಭದಲ್ಲಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಸಾವಿರಾರು ಜನರನ್ನು ಸೇರಿಸುವ ಹಿನ್ನೆಲೆಯಲ್ಲಿ ಕಾರ್ಯಕರ್ತರು ಮನೆ ಮನೆ ಭೇಟಿ ಮಾಡುತ್ತಿದ್ದಾರೆ. ಕಾರ್ಯಕ್ರಮದಲ್ಲಿ ಲಕ್ಷಾಂತರ ಜನರು ಭಾಗವಹಿಸುವ ದೃಷ್ಟಿಯಿಂದ ಈಗಾಗಲೇ ಸಿದ್ಧತೆ ಪ್ರಾರಂಭವಾಗಿದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ.
ಸಭೆಯಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಮೋನಪ್ಪ ಭಂಡಾರಿ, ಮಂಡಲ ಅಧ್ಯಕ್ಷರಾದ ವಿಜಯ್ ಕುಮಾರ್ ಶೆಟ್ಟಿ, ಮಂಡಲ ಪ್ರಧಾನ ಕಾರ್ಯದರ್ಶಿ ರೂಪಾ ಡಿ ಬಂಗೇರ, ಸುರೇಂದ್ರ ಜಪ್ಪಿನಮೊಗರು ಹಾಗೂ ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು.