ಇತ್ತೀಚಿನ ಸುದ್ದಿ
ಕರ್ನಾಟಕದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ತನ್ನಿ: ಯಡಿಯೂರಪ್ಪ ಮುಂದೆ ಮಂಡಿಯೂರಿದ ವರಿಷ್ಠರು
27/08/2022, 11:13
ಹೊಸದಿಲ್ಲಿ(reporterkarnataka.com):ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಿಜೆಪಿ ಸಂಸದೀಯ ಮಂಡಳಿಗೆ ನೇಮಕಗೊಂಡ ಬಳಿಕ ಮೊದಲ ಬಾರಿಗೆ ಶುಕ್ರವಾರ ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಪಕ್ಷವನ್ನು ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ತರುವ ಟಾಸ್ಕನ್ನು ಬಿಎಸ್ ವೈಗೆ ವರಿಷ್ಠರು ನೀಡಿದ್ದಾರೆ.
ರಾಜ್ಯದಲ್ಲಿ ಪಕ್ಷ ಸಂಘಟನೆ ಮತ್ತು ಮತ್ತೆ ಬಿಜೆಪಿ ಅಧಿಕಾರಕ್ಕೆ ತರುವ ಮಹತ್ವದ ಹೊಣೆಗಾರಿಕೆಯನ್ನು ವರಿಷ್ಠರು ಯಡಿಯೂರಪ್ಪ ಅವರಿಗೆ ವಹಿಸಿದ್ದಾರೆ.
ಮೊದಲಿಗೆ ಸಂಜೆ 5 ಗಂಟೆ ವೇಳೆಗೆ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ ಸುಮಾರು 20 ನಿಮಿಷ ಮಾತುಕತೆ ನಡೆಸಿದ್ದು, ಈ ವೇಳೆ ಉಭಯ ನಾಯಕರು ರಾಜ್ಯದಲ್ಲಿ ಪಕ್ಷ ಸಂಘಟನೆ ಕುರಿತು ಚರ್ಚೆ ನಡೆಸಿದ್ದಾರೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತನ್ನಿ, ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಿ, ಎಲ್ಲರೂ ಒಗ್ಗೂಡಿ ಮುಂದಡಿಯಿಡಿ ಎಂದು ಮೋದಿ ಅವರು ಹಿರಿಯ ನಾಯಕನಿಗೆ ಸಲಹೆ ನೀಡಿದ್ದಾರೆಂದು ಹೇಳಲಾಗಿದೆ.