9:52 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಚಿತ್ರದುರ್ಗ: ಸಾಯಿಬಾಬಾ ದರ್ಶನಕ್ಕೆ ಹೊರಟ ಬೆಂಗಳೂರಿನ 3 ಮಂದಿ ಸಾವು; ಇಬ್ಬರು ಗಂಭೀರ

27/08/2022, 18:58

ಚಿತ್ರದುರ್ಗ(reporterkarnataka.com):  ಚಿತ್ರದುರ್ಗ ಸಮೀಪದ ಸೀಬಾರ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಶುಕ್ರವಾರ ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರಿನ ದಂಪತಿ ಸೇರಿ 3 ಮಂದಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.

ಮೃತರನ್ನು ಬೆಂಗಳೂರಿನ ಭೂಮಿಕಾ (22), ಸಿಂಚನ(24) ಹಾಗೂ ಅವರ ಪತಿ ಮನೀಷ್(27) ಎಂದು ಗುರುತಿಸಲಾಗಿದೆ.

ಮನೀಷ್ ಹಾಗೂ ಭೂಮಿಕಾ ಸಹೋದರರು. ಗಾಯಗೊಂಡಿರುವ ಗಿರಿಧರ್, ಆಶಾ ಹಾಗೂ ಲಾರಿ ಚಾಲಕನನ್ನು ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಿಸಲಾಗಿದ್ದು ಅವರಲ್ಲಿ ಇಬ್ಬರು ಸ್ಥಿತಿ ಗಂಭೀರವಾಗಿದೆ.

ಬೆಂಗಳೂರಿಂದ ಶಿರಡಿ ಸಾಯಿಬಾಬ ದರ್ಶನಕ್ಕೆ ಮನೀಷ್ ದಂಪತಿ, ಮನೀಷ್ ಸಹೋದರಿ ಮೃತ ಭೂಮಿಕಾ ಸೇರಿ ಐವರು ಕಾರಿನಲ್ಲಿ ರಾತ್ರಿ ತೆರಳುತ್ತಿದ್ದರು.

ಮಾರ್ಗ ಮಧ್ಯದಲ್ಲಿ ನಗರದ ಸೀಬಾರ ಸಮೀಪದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಲಾರಿಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.

ಕಾರು ಚಾಲಕನ ನಿರ್ಲಕ್ಷ್ಯ ಹಾಗೂ ಅತೀ ವೇಗದಿಂದ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು