5:48 PM Saturday19 - April 2025
ಬ್ರೇಕಿಂಗ್ ನ್ಯೂಸ್
Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ…

ಇತ್ತೀಚಿನ ಸುದ್ದಿ

ಸಮಸ್ಯೆಗಳ ಪರಿಹಾರಕ್ಕೆ ಹುಡುಕುವ ಅನ್ವೇಷಣಾ ಶಾಸ್ತ್ರವೇ ಸಂಶೋಧನೆ: ಡಾ. ಜಯವಂತ ನಾಯಕ್

27/08/2022, 20:37

ಮಂಗಳೂರು(reporterkarnataka.com): ನಗರದ ಕೆನರಾ ಕಾಲೇಜಿನ ವಾಣಿಜ್ಯ ಸ್ನಾತಕೋತ್ತರ ವಿಭಾಗದಿಂದ ಆಯೋಜಿಸಿದ “ರಾಜ್ಯ ಮಟ್ಟದ ವಿಚಾರ ಮಂಡಣೆ” ಕಾರ್ಯಕ್ರಮ ನಡೆಯಿತು.

ಮುಖ್ಯ ಅತಿಥಿಯಾಗಿ  ಮಂಗಳೂರು ವಿ.ವಿ. ಕಾಲೇಜಿನ ಅರ್ಥಶಾಸ್ತ್ರ ಪ್ರಾಧ್ಯಾಪಕ  ಡಾ. ಜಯವಂತ ನಾಯಕ್ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸಂಶೋಧನಾ ಪ್ರವೃತ್ತಿಯು ಸಣ್ಣ ವಯಸ್ಸಿನಿಂದಲೇ ಬರಬೇಕು ಎಂದು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಅಧ್ಯಕ್ಷತೆ ವಹಿಸಿದ್ದ ಕೆನರಾ ಹೈಸ್ಕೂಲ್ ಅಸೋಸಿಯೇಷನ್ ಖಜಾಂಜಿ, ಸಿ.ಎ. ವಾಮನ್ ಕಾಮತ್ ಮಾತನಾಡಿ, ವಿದ್ಯಾರ್ಥಿಗಳು ಕಾಲೇಜು ಜೀವನದಲ್ಲಿ ಕೇವಲ ಪಠ್ಯ ಪುಸ್ತಕಕ್ಕೆ ಮಾತ್ರ ತಮ್ಮನ್ನು ಸೀಮಿತಗೊಳಿಸದೆ ಸಂಶೋಧನೆಯ ಮೂಲಕ ಸಮಾಜದಲ್ಲಿರುವ ತೊಂದರೆಗಳಿಗೆ ಸೂಕ್ತ ಪರಿಹಾರವನ್ನು ಕಂಡು ಹುಡುಕಬೇಕು ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲೆ ಡಾ.ಪ್ರೇಮಲತಾ ವಿ., ವಾಣಿಜ್ಯ ವಿಭಾಗದ ಮುಖ್ಯಸ್ಥೆ ದೇಜಮ್ಮ ಎ.,ವಾಣಿಜ್ಯ ಸ್ನಾತಕೋತ್ತರ ವಿಭಾಗ ಸಂಚಾಲಕಿ ಸ್ವಾತಿ ನಾಯಕ್, ಕಾರ್ಯಕ್ರಮದ ಸಂಯೋಜಕರಾದ ಡಾ. ಪ್ರಶಾಂತ್ ಭಟ್, ಮೇಘ, ಉಪಸ್ಥಿತರಿದ್ದರು.

ನಗರದ ವಿವಿಧ ಕಾಲೇಜುಗಳಿಂದ 25ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಸಂಶೋಧನಾ ಪ್ರಬಂಧವನ್ನು ಮಂಡಿಸಿದರು. ಮಮತಾ ಕಾರ್ಯಕ್ರಮವನ್ನು ನಿರೂಪಿಸಿದರು. ಅನ್ವಿಕಾ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು