8:44 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಮಡಿಕೇರಿ ಚಲೋ ತಡೆಗೆ ವಿಧಿಸಿದ ನಿಷೇಧಾಜ್ಞೆಗೆ ತೆರೆ: ನಿಟ್ಟುಸಿರು ಬಿಟ್ಟ ಕೊಡಗಿನ ಜನತೆ

28/08/2022, 17:20

ಮಡಿಕೇರಿ(reporterkarnataka.com): ಜಿಲ್ಲೆಯಲ್ಲಿ ವಿಧಿಸಲಾಗಿದ್ದ ನಾಲ್ಕು ದಿನಗಳ ನಿಷೇಧಾಜ್ಞೆ ಶನಿವಾರ ಸಂಜೆಗೆ ಕೊನೆಗೊಂಡಿದ್ದು, ಕೊಡಗಿನ ಜನತೆ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. 

ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದ ಪ್ರಕರಣದ ಬಳಿಕ ಉಂಟಾದ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಆ. 26 ರಂದು ಕಾಂಗ್ರೆಸ್‌ನಿಂದ ಮಡಿಕೇರಿ ಚಲೋ ಮತ್ತು ಬಿಜೆಪಿಯಿಂದ ಜನ ಜಾಗೃತಿ ಸಮಾವೇಶ ಘೋಷಣೆಯಾಗಿತ್ತು . ಆದರೆ ಕೋಮು ಸೂಕ್ಷ್ಮ ಜಿಲ್ಲೆಯಾದ ಕೊಡಗಿನಲ್ಲಿ ಪರಿಸ್ಥಿತಿಯ ದುರ್ಲಾಭವನ್ನು ಪಡೆಯಲು ಹೊರಗಿನ ವ್ಯಕ್ತಿಗಳು ಹುನ್ನಾರ ನಡೆಸಿರುವುದು ಗೊತ್ತಾಗುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಜಿಲ್ಲಾಡಳಿತ ಆ . 24 ರ ಬೆಳಗ್ಗೆ 6 ರಿಂದ ಆ .27 ಸಂಜೆಯ ತನಕ ನಿಷೇಧಾಜ್ಞೆ ಜಾರಿಗೊಳಿಸಿತ್ತು. 

ಜಿಲ್ಲೆಯಲ್ಲಿ 4 ದಿನಗಳಿಂದ ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಜನಜೀವನ ಎಂದಿನಂತೆಯೇ ಇತ್ತು. ಆದರೆ ಹೊರಗಿನ ಸಮಾಜಘಾತುಕರು ಜಿಲ್ಲೆಗೆ ನುಸುಳದಂತೆ ಎಲ್ಲಾ ಚೆಕ್‌ಪೋಸ್ಟ್‌ಗಳಲ್ಲಿಯೂ ಪೊಲೀಸ್ ಇಲಾಖೆಯಿಂದ ಹೆಚ್ಚಿನ ತಪಾಸಣೆಯೊಂದಿಗೆ ಹೈ ಅಲರ್ಟ್ ಘೋಷಿಸಲಾಗಿತ್ತು. ಇದರಿಂದಾಗಿ ಕೊಡಗಿನ ಪ್ರವಾಸೋದ್ಯಮದ ಮೇಲೂ ಕರಿನೆರಳು ಆವರಿಸಿತ್ತು. ಆದರೆ ಶನಿವಾರ ಸಂಜೆ 6 ಗಂಟೆಗೆ ನಿಷೇಧಾಜ್ಞೆ ಕೊನೆಕಗೊಂಡಿದ್ದು, ಜಿಲ್ಲೆಯ ಜನರು ನಿಟ್ಟುಸಿರು ಬಿಟ್ಟಿದ್ದಾರೆ. ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ಪೊಲೀಸ್ ಪಡೆಗಳೂ ಇದೀಗ ತಮ್ಮತಮ್ಮ ಜಿಲ್ಲೆಗಳತ್ತ ಪ್ರಯಾಣ ಬೆಳೆಸಿವೆ. ನಾಲ್ಕು ದಿನಗಳಿಂದ ಸ್ಥಗಿತವಾಗಿದ್ದ ವಾರದ ಸಂತೆಗಳೂ ಪುನರಾರಂಭಗೊಂಡಿವೆ.

ಇತ್ತೀಚಿನ ಸುದ್ದಿ

ಜಾಹೀರಾತು