6:43 PM Tuesday16 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಸೋಮವಾರಪೇಟೆ: ವ್ಯಕ್ತಿ ಅನುಮಾನಾಸ್ಪದ ರೀತಿಯಲ್ಲಿ ಗುಂಡೇಟಿಗೆ ಬಲಿ; ತನಿಖೆ ಆರಂಭ

30/08/2022, 09:58

ಮಡಿಕೇರಿ(reporterkarnataka.com):
ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ಗುಂಡೇಟಿಗೆ ಬಲಿಯಾಗಿರುವ ಘಟನೆ ತಾಲೂಕಿನ ಸೂರ್ಲಬ್ಬಿ ಗ್ರಾಮದಲ್ಲಿ ನಡೆದಿದೆ. ಯಡವಾರೆ ಗ್ರಾಮದ ಶಿವಕುಮಾರ್ ( 58 ) ಎಂಬವರೇ ಮೃತಪಟ್ಟರು. ಭಾನುವಾರ ಸಂಜೆ ತನ್ನ ನಾಲ್ಕು ಜನ ಸ್ನೇಹಿತರೊಡನೆ ಸೂಲಬ್ಬಿಗೆ ಹೋಗುವುದಾಗಿ ಮನೆಯಲ್ಲಿ ತಿಳಿಸಿ ತೆರಳಿದ ಅವರಿಗೆ ಬೆಳಗ್ಗೆ ಮಗ ಫೋನ್ ಮಾಡಿದ್ದರೂ ಕರೆ ಸ್ವೀಕರಿಸಿರಲಿಲ್ಲ. ನಂತರ ಜೊತೆಯಲ್ಲಿದ್ದವರು ಕರೆ ಸ್ವೀಕರಿಸಿ ನಿಮ್ಮ ತಂದೆ ಬಿದ್ದು ಸ್ವಲ್ಪ ಏಟಾಗಿದೆ. ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದೇವೆ ಎಂದು ಹೇಳಿದರೆನ್ನಲಾಗಿದೆ. ಸಂಜೆಯ ವೇಳೆಗೆ ಅವರಿಗೆ ಗುಂಡೇಟು ಬಿದ್ದಿದ್ದು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

ಸೋಮವಾರ ಬೆಳಗ್ಗೆ ಘಟನೆ ನಡೆದಿದ್ದು, ಕುತ್ತಿಗೆ ಭಾಗಕ್ಕೆ ಗುಂಡೇಟು ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಶಿವಕುಮಾರ್ ಅವರನ್ನು ಚಿಕಿತ್ಸೆಗಾಗಿ ಮೈಸೂರಿಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎನ್ನಲಾಗಿದ್ದು, ಬೇಟೆಗೆ ತೆರಳಿದ ಸಂದರ್ಭ ಘಟನೆ ನಡೆದಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಮೃತದೇಹವನ್ನು ಸೋಮವಾರಪೇಟೆ ಶವಾಗಾರಕ್ಕೆ ತರಲಾಗಿದ್ದು ಡಿ.ವೈ.ಎಸ್.ಪಿ. ಗಂಗಾಧರಯ್ಯ ಮಾರ್ಗದರ್ಶನದಲ್ಲಿ ಸಬ್‌ಇನ್ಸೆಕ್ಟರ್ ರಮೇಶ್ ಕುಮಾರ್ ಮೊಕದ್ದಮೆ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು