11:00 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ನಿಂದ ವನಮಹೊತ್ಸವ: 100ಕ್ಕೂ ಹೆಚ್ಚು ಸಸಿ ನೆಟ್ಟು  ಹಸಿರು ಸಂಭ್ರಮ

25/06/2021, 15:34

ಬ್ರಹ್ಮಾವರ(reporterkarnataka news); ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ, ವನಮಹೋತ್ಸವದ ಅಂಗವಾಗಿ ಗಿಡಗಳನ್ನು ನೆಡುವ ಕಾಯ೯ಕ್ರಮವು ಇಂದು  ಬೆಳಗ್ಗೆ ಕ್ಲಬ್ಬಿನ ಆವರಣದಲ್ಲಿ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿ ಆಗಿದ್ದ, ಅನಿವಾಸಿ ಭಾರತಿ ಹಾಗೂ ಉದ್ಯಮಿ ಕೆಂಜೂರು ಶಶಿಧರ  ಶೆಟ್ಟಿ ಬಹರೈನ್ ಅವರು ಗಿಡ ನೆಡುವ ಮೂಲಕ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇದೆ ಸಂದರ್ಭದಲ್ಲಿ ಮಾತನಾಡಿದ ಅವರು, ಎಲ್ಲ  ಜನರು ತಮ್ಮ ಮನೆಯ ಆವರಣಗಳಲ್ಲಿ ಗಿಡ ನೆಡುವ ಮೂಲಕ ವನಮಹೋತ್ಸವ ಆಚರಿಸಿ ಪರಿಸರ ಬೆಳೆಸಲು ಕರೆ ಕೊಟ್ಟರು.

100ಕ್ಕೂ ಹೆಚ್ಚು ಗಿಡಗಳನ್ನು ಕ್ಲಬ್ಬಿನ ಆವರಣದಲ್ಲಿ ನೆಡಲಾಯಿತು. ಮುಂಬರುವ ದಿನಗಳಲ್ಲಿ ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಇನ್ನಷ್ಟು ಪರಿಸರ ಕಾಳಜಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದ್ದೇವೆ ಎಂದು ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಎಂ. ಚಂದ್ರಶೇಖರ ಹೆಗ್ಡೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಸ್ಪೋರ್ಟ್ಸ್ ಕ್ಲಬ್ ಕಾರ್ಯದರ್ಶಿ ಗ್ರೆಗೊರಿ ಡಿಸಿಲ್ವ ಹಾಗೂ ಸದಸ್ಯರಾದ ಜೇಮ್ಸ್ ಒಲಿವೆಯಿರ, ಜೋಸೆಫ್ ಸುವರೆಸ್, ಸುದೇಶ್ ಹೆಗ್ಡೆ, ಪ್ರಮೋದ್ ಶೆಟ್ಟಿ, ಪ್ರಸನ್ನ ಶೆಟ್ಟಿ , ವಿವೇಕ್ ಕರ್ನೇಲಿಯೋ ಮತ್ತಿತರರು ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು