11:15 PM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಪ್ರಧಾನಿ ಮೋದಿ ಸ್ವಾಗತಕ್ಕೆ ಸಕಲ ಸಿದ್ಧತೆ: 9 ಜಂಕ್ಷನ್‌ಗಳಲ್ಲಿ‌ ಸಂಚಾರ ಮಾರ್ಗ ಬದಲಾವಣೆ; 15 ಕಡೆ ಪಾರ್ಕಿಂಗ್ ವ್ಯವಸ್ಥೆ

31/08/2022, 13:01

ಮಂಗಳೂರು(reporterkarnataka.com): ಸೆ.2ರಂದು ಪ್ರಧಾನಿ ಮೋದಿ ಭಾಗವಹಿಸುವ ನಗರದ ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಮೈದಾನದ ಕಾರ್ಯಕ್ರಮದ ಯಶಸ್ಸಿಗೆ ದ.ಕ.ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಹೇಳಿದ್ದಾರೆ.

ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಢಿಯಲ್ಲಿ ಮಾತನಾಡಿದ ಅವರು ಕಾರ್ಯಕ್ರಮದಲ್ಲಿ ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಸಹಿತ ಸುಮಾರು ಒಂದುವರೆ ಲಕ್ಷಕ್ಕೂ ಅಧಿಕ ಮಂದಿ ಭಾಗವಹಿಸಲಿದ್ದಾರೆ.  ಕೆಲವು ಫಲಾನಭವಿಗಳಿಗೆ ಯೋಜನೆಗಳ ಹಸ್ತಾಂತರ ನಡೆಯಲಿದೆ. ಮಧ್ಯಾಹ್ನ 1ಕ್ಕೆ ಕಾರ್ಯಕ್ರಮ ನಡೆಯಲಿರುವುದರಿಂದ ಸಾರ್ವಜನಿಕರು ಮುಂಚಿತವಾಗಿ ಭಾಗವಹಿಸಬೇಕು. ಸುರಕ್ಷತೆಯ ದೃಷ್ಟಿಯಿಂದ ಕೆಲವು ಮುನ್ನೆಚ್ಚರಿಕಾ ಕ್ರಮಗಳನ್ನು ನಡೆಸಲಾಗುತ್ತಿದೆ ಎಂದರು.

ಫಲಾನುಭವಿಗಳು ಕಡ್ಡಾಯವಾಗಿ ಭಾಗವಹಿಸಬೇಕು ಎಂದು ನಿರ್ದೇಶನ ನೀಡಿಲ್ಲ. ಆದರೆ ಮನವಿ ಮಾಡಲಾಗಿದೆ. ಸಾರ್ವಜನಿಕರು ಮುಕ್ತವಾಗಿ ಭಾಗವಹಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಮಾತನಾಡಿ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಯಾವುದೇ ಆಕ್ಷೇಪಾರ್ಹ ವಸ್ತುಗಳನ್ನು ತರುವಂತಿಲ್ಲ. ಕಮಿಷನರೆಟ್ ವ್ಯಾಪ್ತಿಯ 9 ಜಂಕ್ಷನ್‌ಗಳಲ್ಲಿ‌ ಸಂಚಾರ ಮಾರ್ಗ ಬದಲಿಸಲಾಗುತ್ತದೆ. 15 ಪಾರ್ಕಿಂಗ್ ಸ್ಥಳಗಳನ್ನು ಗುರುತಿಸಲಾಗಿದೆ. ಸಿಎಆರ್, ಕೆಎಸ್ಸಾರ್ಪಿ, ಹೋಮ್‌ಗಾರ್ಡ್ ಸಹಿತ ವಿವಿಧ ಘಟಕಗಳ ಅಧಿಕಾರಿ, ಸಿಬ್ಬಂದಿಗಳನ್ನು ಬಂದೋಬಸ್ತ್‌ಗೆ ನಿಯೋಜಿಸಲಾಗುತ್ತದೆ ಎಂದು ಹೇಳಿದರು.


ಸಾಮಾಜಿಕ ಜಾಲತಾಣಗಳಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಕಾರ್ಯಕ್ರಮದ ವಿರುದ್ಧ ಅಪಪ್ರಚಾರ ನಡೆಸುತ್ತಿರುವ ಬಗ್ಗೆ 2 ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು