ಇತ್ತೀಚಿನ ಸುದ್ದಿ
ರಸ್ತೆಗೆ ಅಡ್ಡ ಬಂದ ಹಸು: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಅದೃಷ್ಟವಶಾತ್ ಪ್ರಯಾಣಿಕರು ಪಾರು
01/09/2022, 09:05

ಕಾರ್ಕಳ(reporterkarnataka.com):
ರಸ್ತೆಗೆ ಅಡ್ಡ ಬಂದ ಹಸುವೊಂದನ್ನು ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಪಕ್ಕದ ಗುಂಡಿಗೆ ಬಿದ್ದ ಘಟನೆ ಕಾರ್ಕಳ ತಾಲೂಕಿನ ಮಾಳ ಸಮೀಪ ಇಂದು ಸಂಜೆ ನಡೆದಿದೆ.
ಕಾರು ಕಳಸದಿಂದ ಮಂಗಳೂರು ಕಡೆಗೆ ಹೋಗುತ್ತಿದ್ದು, ಘಾಟಿ ಇಳಿದು ಮಾಳಕ್ಕೆ ಸಮೀಪಿಸುತ್ತಿದ್ದಂತೆ ಏಕಾಏಕಿಯಾಗಿ ಹಸುವೊಂದು ಕಾರಿಗೆ ಅಡ್ಡ ಬಂದಿದೆ. ಅದನ್ನು ತಪ್ಪಿಸಲು ಹೋದಂತಹ ವೇಳೆ ಅವಘಡ ಸಂಭವಿಸಿದೆ ಎನ್ನಲಾಗಿದೆ. ಕಾರಿನಲ್ಲಿದ್ದ ಇಬ್ಬರ ಪೈಕಿ ಓರ್ವನಿಗೆ ಸಣ್ಣಪುಟ್ಟ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.