8:53 AM Monday29 - June 2026
ಬ್ರೇಕಿಂಗ್ ನ್ಯೂಸ್
2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಮಂಗಳೂರಿಗೆ ಇಂದು ಸಚಿವರ ದಂಡು!; ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಆಗಮಿಸುವ ಅತಿರಥ ಮಹಾರಥರು!!

02/09/2022, 00:16

ಮಂಗಳೂರು(reporterkarnataka.com): ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು (ಸೆ.2)ಮಂಗಳೂರಿಗೆ ಭೇಟಿ ನೀಡಲಿದ್ದು, ಪ್ರಧಾನಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಆದಿಯಾಗಿ ಸಚಿವರ ದಂಡೇ ಕಡಲನಗರಿ ಮಂಗಳೂರಿಗೆ ಆಗಮಿಸಲಿದೆ.

ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಂಸದೀಯ ವ್ಯವಹಾರಗಳು ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಷಿ, ಬಂದರು, ಹಡಗು ಮತ್ತು ಜಲಸಾರಿಗೆ ಹಾಗೂ ಆಯುಷ್ ಸಚಿವ ಸರ್ಬಾನಂದ್ ಸೋನೋವಾಲ್, ಇಂಧನ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ, ಬಂದರು, ಹಡಗು ಮತ್ತು ಜಲಸಾರಿಗೆ ರಾಜ್ಯ ಸಚಿವರಾದ ಶ್ರೀಪಾದ್ ಯೆಸ್ಸೋ ನಾಯಕ್  ಹಾಗೂ ಶಂತನು ಠಾಕೂರ್, ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್, ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬಂದರು ಹಾಗೂ ಮೀನುಗಾರಿಕೆ ಸಚಿವ ಅಂಗಾರ ಭಾಗವಹಿಸುವರು.

ಪ್ರಧಾನಿ ಮೋದಿ ಅವರು ಬಂದರು, ಒಳನಾಡು ಜಲಸಾರಿಗೆಗೆ ಸಂಬಂಧಿಸಿದ 8 ಯೋಜನೆಗಳ ಲೋಕಾರ್ಪಣೆ ಹಾಗೂ ಶಿಲಾನ್ಯಾಸ ನೆರವೇರಿಸುವರು.

ನಗರದ  ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಮಧ್ಯಾಹ್ನ 1.30ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ  3,800  ಕೋಟಿ ರೂ.ಗಳ ಮೊತ್ತದ 8 ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸ ನಡೆಯಲಿದೆ.

ಪ್ರಧಾನಿ ಲೋಕಾರ್ಪಣೆ ಮಾಡುವ ಯೋಜನೆಗಳಲ್ಲಿ, ಕಂಟೇನರ್ಗಳು ಹಾಗೂ ಇತರೆ ಸರಕು ನಿರ್ವಹಣೆಗಾಗಿ ಬರ್ತ್ ಸಂಖ್ಯೆ 14 ರ ಯಾಂತ್ರೀಕರಣ ( 281 ಕೋಟಿ ರೂ.), ಬಿಎಸ್ VI ಉನ್ನತೀಕರಣ ಯೋಜನೆ (1829 ಕೋಟಿ ರೂ.), ಸಮುದ್ರ ನೀರಿನ ನಿರ್ಲವಣೀಕರಣ ಘಟಕ (677 ಕೋಟಿ ರೂ.) ಗಳು ಸೇರಿವೆ. 

ಇದೇ ಸಂದರ್ಭದಲ್ಲಿ ನರೇಂದ್ರ ಮೋದಿ, ಎನ್ಎಂಪಿಟಿಯಲ್ಲಿ ಸಮಗ್ರ ಎಲ್ಪಿಜಿ ಹಾಗೂ ಬೃಹತ್ ಪಿಓಎಲ್ ಸೌಲಭ್ಯ  (ಅಂದಾಜು ವೆಚ್ಚ ರೂ. 500 ಕೋಟಿ), ಶೇಖರಣಾ ಟ್ಯಾಂಕ್ಗಳು ಹಾಗೂ ಖಾದ್ಯ ತೈಲ ಸಂಸ್ಕರಣಾಗಾರ ನಿರ್ಮಾಣ ( 100 ಕೋಟಿ ರೂ.), ಬಿಟುಮಿನ್ ಶೇಖರಣಾ ಟ್ಯಾಂಕ್ ಘಟಕಗಳ ನಿರ್ಮಾಣ  100 ಕೋಟಿ ರೂ.) ಹಾಗೂ ಬಿಟುಮಿನ್, ಖಾದ್ಯ ತೈಲ ಶೇಖರಣಾ ಟ್ಯಾಂಕ್ಗಳು ಹಾಗೂ ಸಂಬಂಧಿತ ಸೌಲಭ್ಯಗಳ ನಿರ್ಮಾಣ (ರೂ. 100 ಕೋಟಿ) ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ.

ಜೊತೆಗೆ, ಕುಳಾಯಿಯಲ್ಲಿ ಇಪಿಸಿ ಮಾದರಿಯಲ್ಲಿ ಮೀನುಗಾರಿಕಾ ಬಂದರು ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ಮಾಡಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು