ಇತ್ತೀಚಿನ ಸುದ್ದಿ
ಕರಾವಳಿಯಲ್ಲಿ ಉದ್ಯೋಗ ಸೃಷ್ಟಿಗೆ ಪ್ರಧಾನಿ ಕ್ರಮ: ಮಂಗಳೂರಿನಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ
02/09/2022, 11:01
ಮಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರು 3800 ಕೋಟಿ ರೂ
ಗಳ ಯೋಜನೆಗೆ ಇಂದು ಚಾಲನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಇದು ಕರಾವಳಿಯಲ್ಲಿ ಉದ್ಯೋಗ ಸೃಷ್ಟಿಗೆ ಪೂರಕವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶುಕ್ರವಾರ ಆಗಮಿಸಿದ ಅವರು ಮಾಧ್ಯಮ ಜತೆ ಮಾತನಾಡಿದರು.
ರಾಜ್ಯದಲ್ಲಿ ಆಳ ಸಮುದ್ರ ಮೀನುಗಾರಿಕೆಗೆ 100 ಬೋಟ್ ಗಳನ್ನು ಕೇಂದ್ರ ಸರಕಾರ ಒದಗಿಸಿದೆ. ಮತ್ಸ್ಯಸಂಪದ ಯೋಜನೆಯಡಿ ಈ ಸೌಲಭ್ಯ ಒದಗಿಸಲಾಗಿದೆ. ಮೀನುಗಾರರಿಗೆ ಕಿಸಾನ್ ಕಾರ್ಡ್ ಸೌಲಭ್ಯವನ್ನು ವಿಸ್ತರಿಸಲಾಗಿದೆ. ಇದರಿಂದ ಸುಲಭದಲ್ಲಿ ಸಾಲ ಸೌಲಭ್ಯ ಪಡೆಯಬಹುದಾಗಿದೆ. ರಾಜ್ಯ ಸರಕಾರ ಕೂಡ ಅನೇಕ ಯೋಜನೆಗಳನ್ನು ಹಮ್ಮಿಕೊಂಡಿದೆ ಎಂದು ಅವರು ನುಡಿದರು.
ಕರಾವಳಿಯ ಸಮಗ್ರ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ಇದರಿಂದ ಈ ಭಾಗದಲ್ಲಿ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಅವರು ತಿಳಿಸಿದರು.