12:04 AM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಕಡಲನಗರಿ ಮಂಗಳೂರಿಗೆ ಪ್ರಧಾನಿ ಮೋದಿ ಆಗಮನ:  ಕರಾವಳಿ ಬಿಜೆಪಿ ಪಾಳಯದಲ್ಲಿ ಗರಿಗೆದರಿದ ಸಂಭ್ರಮ

02/09/2022, 13:44

ಮಂಗಳೂರು(reporterkarnataka.com): ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶುಕ್ರವಾರ ಆಗಮಿಸಿದರು. ಎಲ್ಲೆಡೆ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಪ್ರಧಾನಿ ಮೋದಿ ಅವರನ್ನು ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್, ಕೇಂದ್ರ ಸಚಿವರಾದ ಪ್ರಲ್ಲಾದ ಜೋಷಿ, ಕೇಂದ್ರ ಸಂಸದೀಯ ವ್ಯವಹಾರಗಳು ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಷಿ, ಬಂದರು, ಹಡಗು ಮತ್ತು ಜಲಸಾರಿಗೆ ಹಾಗೂ ಆಯುಷ್ ಸಚಿವ ಸರ್ಬಾನಂದ್ ಸೋನೋವಾಲ್, ಇಂಧನ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ, ಬಂದರು, ಹಡಗು ಮತ್ತು ಜಲಸಾರಿಗೆ ರಾಜ್ಯ ಸಚಿವರಾದ ಶ್ರೀಪಾದ್ ಯೆಸ್ಸೋ ನಾಯಕ್  ಹಾಗೂ ಶಂತನು ಠಾಕೂರ್, ರಾಜ್ಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಎಸ್. ಅಂಗಾರ, ಮೇಯರ್ ಪ್ರೇಮಾನಂದ ಶೆಟ್ಟಿ ಮುಂತಾದವರು ಸ್ವಾಗತಿಸಿದರು.ತುಳುನಾಡಿನ ಸಂಪ್ರದಾಯದಂತೆ ಸ್ವಾಗತಿಸಿದರು.

ಮೋದಿ ಅವರು ಬಂದರು, ಒಳನಾಡು ಜಲಸಾರಿಗೆಗೆ ಸಂಬಂಧಿಸಿದ 8 ಯೋಜನೆಗಳ ಲೋಕಾರ್ಪಣೆ ಹಾಗೂ ಶಿಲಾನ್ಯಾಸ ನೆರವೇರಿಸುವರು.

ನಗರದ  ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಮಧ್ಯಾಹ್ನ 1.30ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ  3,800  ಕೋಟಿ ರೂ.ಗಳ ಮೊತ್ತದ 8 ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸ ನಡೆಯಲಿದೆ.

ಪ್ರಧಾನಿ ಲೋಕಾರ್ಪಣೆ ಮಾಡುವ ಯೋಜನೆಗಳಲ್ಲಿ, ಕಂಟೇನರ್ಗಳು ಹಾಗೂ ಇತರೆ ಸರಕು ನಿರ್ವಹಣೆಗಾಗಿ ಬರ್ತ್ ಸಂಖ್ಯೆ 14 ರ ಯಾಂತ್ರೀಕರಣ ( 281 ಕೋಟಿ ರೂ.), ಬಿಎಸ್ VI ಉನ್ನತೀಕರಣ ಯೋಜನೆ (1829 ಕೋಟಿ ರೂ.), ಸಮುದ್ರ ನೀರಿನ ನಿರ್ಲವಣೀಕರಣ ಘಟಕ (

677 ಕೋಟಿ ರೂ.) ಗಳು ಸೇರಿವೆ. 

ಇದೇ ಸಂದರ್ಭದಲ್ಲಿ ನರೇಂದ್ರ ಮೋದಿ, ಎನ್ಎಂಪಿಟಿಯಲ್ಲಿ ಸಮಗ್ರ ಎಲ್ಪಿಜಿ ಹಾಗೂ ಬೃಹತ್ ಪಿಓಎಲ್ ಸೌಲಭ್ಯ  (ಅಂದಾಜು ವೆಚ್ಚ ರೂ. 500 ಕೋಟಿ), ಶೇಖರಣಾ ಟ್ಯಾಂಕ್ಗಳು ಹಾಗೂ ಖಾದ್ಯ ತೈಲ ಸಂಸ್ಕರಣಾಗಾರ ನಿರ್ಮಾಣ ( 100 ಕೋಟಿ ರೂ.), ಬಿಟುಮಿನ್ ಶೇಖರಣಾ ಟ್ಯಾಂಕ್ ಘಟಕಗಳ ನಿರ್ಮಾಣ  100 ಕೋಟಿ ರೂ.) ಹಾಗೂ ಬಿಟುಮಿನ್, ಖಾದ್ಯ ತೈಲ ಶೇಖರಣಾ ಟ್ಯಾಂಕ್ಗಳು ಹಾಗೂ ಸಂಬಂಧಿತ ಸೌಲಭ್ಯಗಳ ನಿರ್ಮಾಣ (ರೂ. 100 ಕೋಟಿ) ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ.

ಜೊತೆಗೆ, ಕುಳಾಯಿಯಲ್ಲಿ ಇಪಿಸಿ ಮಾದರಿಯಲ್ಲಿ ಮೀನುಗಾರಿಕಾ ಬಂದರು ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ಮಾಡಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು