8:16 PM Sunday29 - March 2026
ಬ್ರೇಕಿಂಗ್ ನ್ಯೂಸ್
ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌

ಇತ್ತೀಚಿನ ಸುದ್ದಿ

ಮಂಗಳೂರು: ಪ್ರಧಾನಿ ಮೋದಿ ಅವರಿಂದ  3,800 ಕೋಟಿ ಮೊತ್ತದ 8 ಯೋಜನೆಗಳ ಲೋಕಾರ್ಪಣೆ, ಶಿಲಾನ್ಯಾಸ

02/09/2022, 15:30

ಮಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಮಂಗಳೂರಿನಲ್ಲಿ  3,800 ಕೋಟಿ ಮೊತ್ತದ 8 ಯೋಜನೆಗಳ ಲೋಕಾರ್ಪಣೆ ಹಾಗೂ ಶಿಲಾನ್ಯಾಸ ನೆರವೇರಿಸಿದರು.

ನಗರದ ಬಂಗ್ರೆ ಕೂಳೂರಿನ  ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಮಧ್ಯಾಹ್ನ ನಡೆದ ಕಾರ್ಯಕ್ರಮದಲ್ಲಿ ಅವರು ಬಂದರು, ಒಳನಾಡು ಜಲಸಾರಿಗೆಗೆ ಸಂಬಂಧಿಸಿದ 8 ಯೋಜನೆಗಳ ಲೋಕಾರ್ಪಣೆ ಹಾಗೂ ಶಿಲಾನ್ಯಾಸ ಪೂರೈಸಿದರು.


ಪ್ರಧಾನಿ ಲೋಕಾರ್ಪಣೆ ಮಾಡಿದ ಯೋಜನೆಗಳಲ್ಲಿ, ಕಂಟೇನರ್ಗಳು ಹಾಗೂ ಇತರೆ ಸರಕು ನಿರ್ವಹಣೆಗಾಗಿ ಬರ್ತ್ ಸಂಖ್ಯೆ 14 ರ ಯಾಂತ್ರೀಕರಣ ( 281 ಕೋಟಿ ರೂ.), ಬಿಎಸ್ VI ಉನ್ನತೀಕರಣ ಯೋಜನೆ (1829 ಕೋಟಿ ರೂ.), ಸಮುದ್ರ ನೀರಿನ ನಿರ್ಲವಣೀಕರಣ ಘಟಕ (677 ಕೋಟಿ ರೂ.) ಗಳು ಸೇರಿವೆ. 

ಇದೇ ಸಂದರ್ಭದಲ್ಲಿ ನರೇಂದ್ರ ಮೋದಿ, ಎನ್ಎಂಪಿಟಿಯಲ್ಲಿ ಸಮಗ್ರ ಎಲ್ಪಿಜಿ ಹಾಗೂ ಬೃಹತ್ ಪಿಓಎಲ್ ಸೌಲಭ್ಯ  (ಅಂದಾಜು ವೆಚ್ಚ ರೂ. 500 ಕೋಟಿ), ಶೇಖರಣಾ ಟ್ಯಾಂಕ್ಗಳು ಹಾಗೂ ಖಾದ್ಯ ತೈಲ ಸಂಸ್ಕರಣಾಗಾರ ನಿರ್ಮಾಣ ( 100 ಕೋಟಿ ರೂ.), ಬಿಟುಮಿನ್ ಶೇಖರಣಾ ಟ್ಯಾಂಕ್ ಘಟಕಗಳ ನಿರ್ಮಾಣ  100 ಕೋಟಿ ರೂ.) ಹಾಗೂ ಬಿಟುಮಿನ್, ಖಾದ್ಯ ತೈಲ ಶೇಖರಣಾ ಟ್ಯಾಂಕ್ಗಳು ಹಾಗೂ ಸಂಬಂಧಿತ ಸೌಲಭ್ಯಗಳ ನಿರ್ಮಾಣ (ರೂ. 100 ಕೋಟಿ) ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿದರು.

ಜೊತೆಗೆ, ಕುಳಾಯಿಯಲ್ಲಿ ಇಪಿಸಿ ಮಾದರಿಯಲ್ಲಿ ಮೀನುಗಾರಿಕಾ ಬಂದರು ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ಮಾಡಿದರು.

ಈ ಸಂದರ್ಭದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಂಸದೀಯ ವ್ಯವಹಾರಗಳು ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಷಿ, ಬಂದರು, ಹಡಗು ಮತ್ತು ಜಲಸಾರಿಗೆ ಹಾಗೂ ಆಯುಷ್ ಸಚಿವ ಸರ್ಬಾನಂದ್ ಸೋನೋವಾಲ್, ಇಂಧನ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ, ಬಂದರು, ಹಡಗು ಮತ್ತು ಜಲಸಾರಿಗೆ ರಾಜ್ಯ ಸಚಿವರಾದ ಶ್ರೀಪಾದ್ ಯೆಸ್ಸೋ ನಾಯಕ್  ಹಾಗೂ ಶಂತನು ಠಾಕೂರ್ ಉಪಸ್ಥಿತರಿದ್ದರು..

ಇತ್ತೀಚಿನ ಸುದ್ದಿ

ಜಾಹೀರಾತು