1:24 AM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಮಂಗಳೂರಿಗೆ ಪ್ರಧಾನಿ ಭೇಟಿ: ಬಸ್ ಸಂಚಾರ ಸ್ಥಗಿತ; ಜನಸಾಮಾನ್ಯರ ಪರದಾಟ; ಮಾಹಿತಿ ನೀಡದ ಕೆಎಸ್ಸಾರ್ಟಿಸಿ

02/09/2022, 19:19

ಮಂಗಳೂರು/ಚಿಕ್ಕಮಗಳೂರು(reporterkarnataka.com):
ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆಯಲ್ಲಿ ಮಂಗಳೂರು, ಚಿಕ್ಕಮಗಳೂರು, ಹಾಸನ ಮತ್ತು ಮಡಿಕೇರಿ ಜಿಲ್ಲೆಗಳ ಪ್ರಯಾಣಿಕರು ಬಸ್ ಇಲ್ಲದೆ ಪರದಾಡಬೇಕಾಯಿತು. ಚಿಕ್ಕಮಗಳೂರಿನಿಂದ ಮಂಗಳೂರು ಮಾರ್ಗ-ಮಂಗಳೂರು ಮಾರ್ಗದಿಂದ ಚಿಕ್ಕಮಗಳೂರು ಬರುವ ಕೆಎಸ್ಸಾರ್ಟಿಸಿ ಬಸ್ ಸಂಚಾರ ಸ್ಥಗಿತಗೊಂಡಿತ್ತು. ಚಿಕ್ಕಮಗಳೂರು ಮೂಡಿಗೆರೆ ಕೊಟ್ಟಿಗೆಹಾರ ಮಾರ್ಗದಿಂದ ಸಂಚರಿಸುವ ಕೆಎಸ್ಸಾರ್ಟಿಸಿ ಬಸ್ಸುಗಳು ಬೆಳೆಗ್ಗೆ 6 ರಿಂದ ಸ್ಥಗಿತಗೊಳಿಸಲಾಗಿತ್ತು.

ಸಾರ್ವಜನಿಕರು, ರೋಗಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಬಸ್ ನಿಲ್ದಾಣದಲ್ಲಿ ಕಾಯುವ ಪರಿಸ್ಥಿತಿ ಉಂಟಾಯಿತು. ಬಸ್ ಸ್ಥಗಿತದ ಕುರಿತು

ಚಿಕ್ಕಮಗಳೂರು ಕೆಎಸ್ಸಾರ್ಟಿಸಿಯ  ಹಿರಿಯ ಅಧಿಕಾರಿಗಳು ಯಾವುದೇ ಪ್ರಕಟಣೆಯಲ್ಲಿ ತಿಳಿಸಿಲ್ಲ ಎಂದು ಪ್ರಯಾಣಿಕರು ಅವರ ಮೇಲೆ ಹಿಡಿ ಶಾಪ ಹಾಕಿ ಮನೆಗೆ ತೆರಳುತ್ತಿದ್ದದ್ದು ಕಂಡು ಬಂತು.

ಇತ್ತೀಚಿನ ಸುದ್ದಿ

ಜಾಹೀರಾತು