ಇತ್ತೀಚಿನ ಸುದ್ದಿ
ಸಂಘನಿಕೇತನ ಗಣೇಶೋತ್ಸವ ಅಮೃತ ಮಹೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಮೆರುಗು
02/09/2022, 19:45

ಚಿತ್ರ: ಮಂಜು ನೀರೇಶ್ವಾಲ್ಯ
ಮಂಗಳೂರು(reporterkarnataka.com): ನಗರದ ಮಣ್ಣಗುಡ್ಡೆಯಲ್ಲಿರುವ ಸಂಘನಿಕೇತನದಲ್ಲಿ ಕೇಶವ ಸ್ಮ್ರತಿ ಸಂವರ್ಧನ ಸಮಿತಿಯ ಆಶ್ರಯದಲ್ಲಿ ನಡೆಯುತ್ತಿರುವ 75ನೇ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಅಮೃತ ಮಹೋತ್ಸವ ಸಂಭ್ರಮಕ್ಕೆ ಸಾಂಸ್ಕೃತಿಕ ವೈಭವ ಮೆರುಗು ನೀಡಿತು.
ಗಣೇಶೋತ್ಸವ ಪ್ರಯುಕ್ತ ಆಗಸ್ಟ್ 30ರಂದು ಶ್ರೀ ಮಹಾಗಣಪತಿ ದೇವರ ಮೃತಿಕಾ ವಿಗ್ರಹವನ್ನು ವಿಜೃಂಭಣೆಯಿಂದ ತರಲಾಯಿತು . ಸೆ.4ರ ವರೆಗೆ ಗಣೇಶೋತ್ಸವ ನಡೆಯಲಿದೆ. ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಯಿತು.