3:46 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಬೆಳ್ತಂಗಡಿ: ಅಪ್ರಾಪ್ತೆಯ ಮನೆಗೆ ದಿನಾ ತಡರಾತ್ರಿ ಬರುತ್ತಿದ್ದ ಯುವಕ; ಕಾದು ಕುಳಿತು ಸೆರೆ ಹಿಡಿದ ಸ್ಥಳೀಯರು!

03/09/2022, 23:15

ಬೆಳ್ತಂಗಡಿ(reporterkarnataka.com): ದಿನಾ ತಡರಾತ್ರಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮನೆಗೆ 
ಬಂದು ಆಕೆಯೊಂದಿಗೆ ಲೈಂಗಿಕ ಸಂಪರ್ಕ ನಡೆಸಿದ ಆರೋಪದ ಮೇಲೆ ಯುವಕನೊಬ್ಬನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಿಡ್ಲೆ ಸಮೀಪ ನಡೆದಿದೆ.

ಯುವಕ ಅಪ್ರಾಪ್ತ ಸ್ನೇಹಿತೆಯೊಂದಿಗೆ ಲೈಂಗಿಕ ಸಂಪರ್ಕ ನಡೆಸಿದ್ದು, ಆತನ ವಿರುದ್ದ ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲಾಗಿದೆ.

ನಿಡ್ಲೆ ಕುದ್ರಾಯ ಸಮೀಪ ಕಳೆದ ಕೆಲವು ದಿನಗಳಿಂದ ಅಲ್ಲಲ್ಲಿ ಬೈಕ್ ನಿಲ್ಲಿಸಲಾಗುತ್ತಿದ್ದ ವ್ಯಕ್ತಿ ಯಾರು ಎಂಬುದು ಇಲ್ಲಿನ ಸ್ಥಳೀಯರ ಬಹುದೊಡ್ಡ ಪ್ರಶ್ನೆಯಾಗಿತ್ತು. ಅಲ್ಲದೇ ಅಕ್ರಮ ಸಂಬಂಧ ಎಂಬ ಸುದ್ದಿ ಹಬ್ಬಿದ್ದು ಸ್ಥಳೀಯ ಕೆಲ ಕೆಂಪು ಬೈಕು ಹೊಂದಿದವರ ಮೇಲೆ ಅನುಮಾನದ ಮಾತುಗಳು ಕೇಳಿಬಂದಿತ್ತು. ಈ ಹಿನ್ನಲೆಯಲ್ಲಿ ನಿನ್ನೆ ತಡರಾತ್ರಿ ಬೈಕ್ ಇದ್ದದ್ದನ್ನು ಗಮನಿಸಿದ ಸ್ಥಳೀಯರು, ಆತ ಯಾರು ಎಂದು ತಿಳಿಯಲು ರಾತ್ರಿ ಕಾದು ಮುಂಜಾನೆ 5ರ ವೇಳೆಗೆ ಆತನನ್ನು ಹಿಡಿದಿದ್ದಾರೆ.

ಇನ್ನು ಧರ್ಮಸ್ಥಳ ಸಮೀಪದ ಅಶೋಕನಗರದ ನಿವಾಸಿಯಾಗಿರುವ ಈ ಯುವಕ, ತನ್ನ ಸ್ನೇಹಿತೆ ಅಪ್ರಾಪ್ತ ಬಾಲಕಿಯೋರ್ವಳೊಂದಿಗೆ ಸಂಬಂಧ ಇಟ್ಟುಕೊಂಡಿರುವುದಾಗಿ ತಿಳಿದು ಬಂದಿದೆ.

ಅಲ್ಲದೇ ಆತ ತಡರಾತ್ರಿ ಸ್ನೇಹಿತೆಯ ಮನೆಗೆ ಬಂದು ಮನೆಯವರಿಗೆ ತಿಳಿಯದಂತೆ ಆಕೆಯೊಂದಿಗೆ ಸಂಪರ್ಕ ಬೆಳೆಸಿದ್ದ, ಇದನ್ನು ಕಂಡ ಸ್ಥಳೀಯರು ಆತನನ್ನು ಹಿಡಿದಿದ್ದಾರೆ.

ಸದ್ಯ ಬಾಲಕಿಯ ಕಡೆಯವರ ದೂರಿನ ಹಿನ್ನಲೆಯಲ್ಲಿ ಯುವಕನ ಮೇಲೆ ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು