8:43 PM Friday12 - December 2025
ಬ್ರೇಕಿಂಗ್ ನ್ಯೂಸ್
ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ ಆರೆಸ್ಸೆಸ್ ಅಂದ್ರೆ ಉರಿಯುವ ಕಾಂಗ್ರೆಸ್ ನಾಯಕರಿಗೆ ಅವರ ಸರ್ಕಾರದಿಂದಲೇ ಉತ್ತರ: ಕೇಂದ್ರ ಸಚಿವ… ಮೈಸೂರು-ಕುಶಾಲನಗರ ಹೆದ್ದಾರಿ ಪ್ಯಾಕೇಜ್ 2 ಕಾಮಗಾರಿ ಆರಂಭ: 4126 ಕೋಟಿ ವೆಚ್ಚದಲ್ಲಿ ಅಗಲೀಕರಣ ಭೂ ಪರಿವರ್ತನೆ ನಿಯಮಗಳ ಸರಳೀಕರಣ: ವಿಧಾನ ಪರಿಷತ್ ನಲ್ಲಿ ಸಚಿವ ಕೃಷ್ಣ ಬೈರೇಗೌಡ ರಾಜ್ಯದಲ್ಲಿ 37,48,700 ವಸತಿ ರಹಿತರು: ವಿಧಾನ ಪರಿಷತ್ ನಲ್ಲಿ ಸಚಿವ ಜಮೀರ್ ಖಾನ್ ಬೆಂಗಳೂರು ಸೈಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದಲ್ಲಿ ಧರ್ಮ ಮತ್ತು ಸಂಸ್ಕೃತಿ ಅಧ್ಯಯನ ಕೇಂದ್ರ ಉದ್ಘಾಟನೆ

ಇತ್ತೀಚಿನ ಸುದ್ದಿ

ಸಿಇಟಿ ಹೊಸ RANK ಪಟ್ಟಿ ಪ್ರಕಟಿಸಿ: ಕೆಇಎಗೆ ರಾಜ್ಯ ಹೈಕೋರ್ಟ್ ಮಹತ್ವದ ಆದೇಶ

04/09/2022, 12:46

ಬೆಂಗಳೂರು(reporterkarnataka.com):
2020-21 ನೇ ಸಾಲಿನ ದ್ವಿತೀಯ ಪಿಯುಸಿ
ಅಂಕಗಳನ್ನು ಪರಿಗಣಿಸಿ ಹೊಸ ಸಿಇಟಿ ರ್ಯಾಕಿಂಗ್ (RANKING) ಪಟ್ಟಿ ಪ್ರಕಟಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) ಹೈಕೋರ್ಟ್ ನಿರ್ದೇಶನ ನೀಡಿದೆ.

ಮರುಪರೀಕ್ಷೆ ಬರೆದ ಅಭ್ಯರ್ಥಿಗಳ ಪ್ರಸಕ್ತ ಸಾಲಿನ ಸಿಇಟಿ ಅಂಕಗಳ ಜೊತೆಗೆ 2020-21ನೇ ಸಾಲಿನ ದ್ವಿತೀಯ ಪಿಯುಸಿ ಅಂಕಗಳನ್ನು ಪರಿಗಣಿಸಿ ಹೊಸ ಸಿಇಟಿ ರ್ಯಾಕಿಂಗ್ ಪಟ್ಟಿ ಪ್ರಕಟಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಹೈಕೋರ್ಟ್ ತಿಳಿಸಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಜುಲೈ 30 ರಂದು ಹೊರಡಿಸಲಾಗಿದ್ದ 2021-22 ರ ಸಿಟಿಟಿ ಫಲಿತಾಂಶವನ್ನು ರದ್ದುಪಡಿಸಿರುವ ಹೈಕೋರ್ಟ್, ಕೋರ್ಸ್ ಗಳ ಪ್ರವೇಶಾತಿಗೆ ಸಿಇಟಿ ಮರು ಪರೀಕ್ಷೆ ಬರೆದ ಎಲ್ಲ ವಿದ್ಯಾರ್ಥಿಗಳ ಪಿಯುಸಿ ಪರೀಕ್ಷೆಯ ಶೇ. 50 ಅಂಕ ಹಾಗೂ ಸಿಇಟಿಯಲ್ಲಿ ಪಡೆದಿರುವ ಶೇ. 50 ಅಂಕ ಪರಿಗಣಿಸಿ ಹೊಸ ರ್ಯಾಂಕ್ ಪಟ್ಟಿ ಪ್ರಕಟಿಸುವಂತೆ ಆದೇಶಿಸಿದೆ.

2020-21ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿಗಳು ಪಿಯು ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು 2022ನೇ ಸಾಲಿನಲ್ಲಿ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಪರಿಗಣಿಸುವುದಿಲ್ಲ ಎಂದಿದ್ದ ಕೆಇಎ ಆದೇಶ ಪ್ರಶ್ನಿಸಿ ಚಿಕ್ಕಮಗಳೂರಿನ ಆರ್‌ ಈಶ್ವರ್‌ ಸೇರಿದಂತೆ ಹಲವರು ಪ್ರತ್ಯೇಕವಾಗಿ ಸಲ್ಲಿಸಿದ್ದ ಒಟ್ಟು ಏಳು ಮನವಿಗಳ ವಿಚಾರಣೆಯನ್ನು ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಸ್‌ ಆರ್‌ ಕೃಷ್ಣ ಕುಮಾರ್‌ ಅವರ ನೇತೃತ್ವದ ಏಕಸದಸ್ಯ ಪೀಠವು ಪ್ರಕಟಿಸಿತು.

ಇತ್ತೀಚಿನ ಸುದ್ದಿ

ಜಾಹೀರಾತು